IPL 2024: RCB ಗೆಲ್ಲಲ್ಲ, ಪ್ಲೇಆಫ್ ಪ್ರವೇಶಿಸಲ್ಲ ಎಂದ ಐವರು ಮಾಜಿ ಕ್ರಿಕೆಟಿಗರು
IPL 2024 RCB vs CSK: ಐಪಿಎಲ್ನಲ್ಲಿ RCB ಮತ್ತು CSK ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 10 ಮ್ಯಾಚ್ಗಳಲ್ಲಿ ಮಾತ್ರ. ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್ 21 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.
1 / 8
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) ಸೀಸನ್ 17 ರ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 65 ಪಂದ್ಯಗಳ ಮುಕ್ತಾಯದ ಬಳಿಕ ಪ್ಲೇಆಫ್ ಪ್ರವೇಶಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮಾತ್ರ. ಇನ್ನುಳಿದ 2 ಸ್ಥಾನಗಳಿಗಾಗಿ ಸನ್ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.
2 / 8
ಈ ಪೈಪೋಟಿಯಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 2 ತಂಡಗಳಾವುವು ಎಂಬುದೇ ಕುತೂಹಲ. ಈ ಕುತೂಹಲವನ್ನು ತಣಿಸುವಂತೆ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್, ಅಂಬಾಟಿ ರಾಯುಡು, ಮೊಹಮ್ಮದ್ ಕೈಫ್, ಮ್ಯಾಥ್ಯೂ ಹೇಡನ್ ಮತ್ತು ಟಾಮ್ ಮೂಡಿ ಟಾಪ್-4 ತಂಡಗಳನ್ನು ಹೆಸರಿಸಿದ್ದಾರೆ.
3 / 8
ಚಾನೆಲ್ ಚರ್ಚೆಯಲ್ಲಿ ಈ ಬಗ್ಗೆ ಮಾತನಾಡಿರುವ ಇರ್ಫಾನ್ ಪಠಾಣ್, ಆರ್ಸಿಬಿ ಮತ್ತು ಸಿಎಸ್ಕೆ ನಡುವಣ ಮುಖಾಮುಖಿಯಲ್ಲಿ ನನ್ನ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲ್ಲಲಿದೆ. ಈ ಮೂಲಕ ಸಿಎಸ್ಕೆ ಮತ್ತು ಎಸ್ಆರ್ಹೆಚ್ ತಂಡಗಳು ಪ್ಲೇಆಫ್ ಪ್ರವೇಶಿಸಿದೆ. ಅದರಂತೆ ಟಾಪ್-4 ನಲ್ಲಿ ಕೆಕೆಆರ್, ಆರ್ಆರ್, ಸಿಎಸ್ಕೆ, ಎಸ್ಆರ್ಹೆಚ್ ತಂಡಗಳು ಕಾಣಿಸಿಕೊಳ್ಳಲಿದೆ ಎಂದಿದ್ದಾರೆ.
4 / 8
ಇನ್ನು ಅಂಬಾಟಿ ರಾಯುಡು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಸನ್ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದಿದ್ದಾರೆ. ಈ ಮೂಲಕ ಆರ್ಸಿಬಿ ವಿರುದ್ಧ ಸಿಎಸ್ಕೆ ತಂಡವೇ ಗೆಲ್ಲಲಿದೆ ಎಂದು ಒತ್ತಿ ಹೇಳಿದ್ದಾರೆ.
5 / 8
ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ಕೂಡ ಇದೇ ಅಭಿಪ್ರಾಯವನ್ನು ಮುಂದಿಟ್ಟಿದ್ದು, ಆರ್ಸಿಬಿ ವಿರುದ್ಧ ಸಿಎಸ್ಕೆ ಗೆಲ್ಲುವ ಮೂಲಕ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ. ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಸನ್ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದು ತಿಳಿಸಿದ್ದಾರೆ.
6 / 8
ಇನ್ನು ಭಾರತ ತಂಡದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಹ ಸಿಎಸ್ಕೆ ವಿರುದ್ಧ ಆರ್ಸಿಬಿ ಗೆಲ್ಲುವುದು ಕಷ್ಟಸಾಧ್ಯ ಎಂದಿದ್ದಾರೆ. ಕೊನೆಯ ಪಂದ್ಯದಲ್ಲಿ ಸಿಎಸ್ಕೆ ಗೆಲ್ಲುವ ಮೂಲಕ ಪ್ಲೇಆಫ್ ಪ್ರವೇಶಿಸಲಿದೆ. ಈ ಮೂಲಕ ಕೆಕೆಆರ್, ಆರ್ಆರ್, ಎಸ್ಆರ್ಹೆಚ್ ಮತ್ತು ಸಿಎಸ್ಕೆ ಪ್ಲೇಆಫ್ ಪಂದ್ಯಗಳನ್ನಾಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
7 / 8
ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಟಾಮ್ ಮೂಡಿ ಕೂಡ ಕೆಕೆಆರ್, ಆರ್ಆರ್, ಎಸ್ಆರ್ಹೆಚ್ ಮತ್ತು ಸಿಎಸ್ಕೆ ತಂಡಗಳು ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದಿದ್ದಾರೆ. ನಿರ್ಣಾಯಕವಾಗಿರುವ ಪಂದ್ಯದಲ್ಲಿ ಆರ್ಸಿಬಿಗೆ ಸೋಲುಣಿಸಿ ಸಿಎಸ್ಕೆ ಪ್ಲೇಆಫ್ ಪ್ರವೇಶಿಸಲಿದೆ ಎಂದು ಟಾಮ್ ಮೂಡಿ ಭವಿಷ್ಯ ನುಡಿದಿದ್ದಾರೆ.
8 / 8
ಅಂದರೆ ಕ್ರಿಕೆಟ್ ವಿಶ್ಲೇಷಕರ ಪ್ರಕಾರ ಆರ್ಸಿಬಿ ಈ ಬಾರಿ ಪ್ಲೇಆಫ್ ಪ್ರವೇಶಿಸುವುದಿಲ್ಲ. ಇದಾಗ್ಯೂ ಅಂತಿಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಆರ್ಸಿಬಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದೆಯಾ ಕಾದು ನೋಡಬೇಕಿದೆ.
Published On - 12:07 pm, Thu, 16 May 24