IPL 2024: ಆರೆಂಜ್ ಕ್ಯಾಪ್​ ರೇಸ್​ನಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ರುತುರಾಜ್ ಗಾಯಕ್ವಾಡ್

| Updated By: ಝಾಹಿರ್ ಯೂಸುಫ್

Updated on: May 02, 2024 | 7:35 AM

IPL 2024: ಐಪಿಎಲ್​ 2024 ರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಭಾರತದ ಐವರು ಬ್ಯಾಟ್ಸ್​ಮನ್​ಗಳು ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಅಗ್ರಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್. ಕಳೆದ 2 ವಾರಗಳಿಂದ ಮೊದಲ ಸ್ಥಾನದಲ್ಲಿದ್ದ ಕಿಂಗ್ ಕೊಹ್ಲಿಯನ್ನು ಹಿಂದಿಕ್ಕುವಲ್ಲಿ ರುತುರಾಜ್ ಯಶಸ್ವಿಯಾಗಿದ್ದಾರೆ.

1 / 7
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 49ನೇ ಪಂದ್ಯದಲ್ಲಿ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರುತುರಾಜ್ 48 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 62 ರನ್ ಬಾರಿಸಿದ್ದರು.

2 / 7
ಈ ಅರ್ಧಶತಕದೊಂದಿಗೆ ಇದೀಗ ರುತುರಾಜ್ ಗಾಯಕ್ವಾಡ್ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರು. ಇದೀಗ ಕೊಹ್ಲಿಯನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿರುವ ರುತುರಾಜ್ ಐಪಿಎಲ್ 2024 ರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

3 / 7
1- ರುತುರಾಜ್ ಗಾಯಕ್ವಾಡ್ (CSK): ಈ ಬಾರಿಯ ಐಪಿಎಲ್​ನಲ್ಲಿ 10 ಇನಿಂಗ್ಸ್ ಆಡಿರುವ ರುತುರಾಜ್ ಗಾಯಕ್ವಾಡ್ 1 ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 509 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್​ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

4 / 7
2- ವಿರಾಟ್ ಕೊಹ್ಲಿ (RCB): 10 ಇನಿಂಗ್ಸ್​ಗಳಲ್ಲಿ 4 ಅರ್ಧಶತಕ ಮತ್ತು 1 ಭರ್ಜರಿ ಸೆಂಚುರಿ ಸಿಡಿಸಿರುವ ವಿರಾಟ್ ಕೊಹ್ಲಿ ಈವರೆಗೆ ಒಟ್ಟು 500 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

5 / 7
3- ಸಾಯಿ ಸುದರ್ಶನ್ (GT): ಗುಜರಾತ್ ಟೈಟಾನ್ಸ್ ತಂಡದ ಯುವ ದಾಂಡಿಗ ಸಾಯಿ ಸುದರ್ಶನ್ ಐಪಿಎಲ್ 2024 ರಲ್ಲಿ ಈವರೆಗೆ 10 ಇನಿಂಗ್ಸ್ ಆಡಿದ್ದು, ಈ ವೇಳೆ 2 ಅರ್ಧಶತಕ ಸಿಡಿಸುವ ಮೂಲಕ ಒಟ್ಟು 418 ರನ್​ ಕಲೆಹಾಕಿದ್ದಾರೆ.

6 / 7
4- ಕೆಎಲ್ ರಾಹುಲ್ (LSG): ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಉತ್ತಮ ಫಾರ್ಮ್​ನಲ್ಲಿದ್ದು, 10 ಇನಿಂಗ್ಸ್​ಗಳಲ್ಲಿ 3 ಅರ್ಧಶತಕಗಳೊಂದಿಗೆ ಒಟ್ಟು 406 ರನ್​ ಗಳಿಸಿದ್ದಾರೆ.

7 / 7
5- ರಿಷಭ್ ಪಂತ್ (DC): ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುತ್ತಿರುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸಹ ಉತ್ತಮ ಪ್ರದರ್ಶನ ನೀಡಿದ್ದಾರೆ. 11 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಪಂತ್ 3 ಹಾಫ್ ಸೆಂಚುರಿಗಳೊಂದಿಗೆ ಒಟ್ಟು 398 ರನ್ ಕಲೆಹಾಕಿದ್ದಾರೆ.