AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ದಾಖಲೆ ಧೂಳೀಪಟ ಮಾಡಿದ ಪಂಜಾಬ್ ಕಿಂಗ್ಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡ ಹೊಸ ಇತಿಹಾಸ ಬರೆದಿದೆ., ಅದು ಸಹ 262 ರನ್​ಗಳನ್ನು ಚೇಸ್ ಮಾಡುವ ಮೂಲಕ ಎಂಬುದು ವಿಶೇಷ. ಈ ಚೇಸಿಂಗ್​ನೊಂದಿಗೆ ಪಂಜಾಬ್ ಪಡೆ ಹಲವು ದಾಖಲೆಗಳನ್ನು ಸಹ ಬರೆದಿದೆ. ಈ ದಾಖಲೆಗಳ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ವಿಶೇಷ ರೆಕಾರ್ಡ್ ಅನ್ನು ಅಳಿಸಿ ಹಾಕಿದೆ.

TV9 Web
| Edited By: |

Updated on: Apr 27, 2024 | 1:03 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2024) ಹೊಸ ಇತಿಹಾಸ ನಿರ್ಮಾಣವಾಗಿದೆ. ಶುಕ್ರವಾರ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 6 ವಿಕೆಟ್ ಕಳೆದುಕೊಂಡು 261 ರನ್ ಕಲೆಹಾಕಿತು.

1 / 5
262 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಅದರಲ್ಲೂ ಜಾನಿ ಬೈರ್​ಸ್ಟೋವ್ ಸ್ಪೋಟಕ ಶತಕ ಸಿಡಿಸಿದರೆ, ಶಶಾಂಕ್ ಸಿಂಗ್ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಅರ್ಧಶತಕ ಬಾರಿಸಿದರು. ಈ ಶತಕ-ಅರ್ಧಶತಕಗಳ ನೆರವಿನೊಂದಿಗೆ ಪಂಜಾಬ್ ಕಿಂಗ್ಸ್ ಕೇವಲ 18.4 ಓವರ್​ಗಳಲ್ಲಿ 262 ರನ್​ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

2 / 5
ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಪಂಜಾಬ್ ಕಿಂಗ್ಸ್ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

3 / 5
ಅಂದರೆ ಟಿ20 ಕ್ರಿಕೆಟ್​ನಲ್ಲಿ ದ್ವಿತೀಯ ಇನಿಂಗ್ಸ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಆರ್​ಸಿಬಿ ತಂಡದ ಹೆಸರಿನಲ್ಲಿತ್ತು. ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 20 ಓವರ್​ಗಳಲ್ಲಿ 262 ರನ್ ಕಲೆಹಾಕಿ ಆರ್​ಸಿಬಿ ಈ ವಿಶೇಷ ವಿಶ್ವ ದಾಖಲೆ ಬರೆದಿತ್ತು.

4 / 5
ಆದರೀಗ ಕೆಕೆಆರ್ ವಿರುದ್ಧ 18.4 ಓವರ್​ಗಳಲ್ಲಿ 262 ರನ್ ಕಲೆಹಾಕುವ ಮೂಲಕ ಪಂಜಾಬ್ ಕಿಂಗ್ಸ್ ಈ ದಾಖಲೆಯನ್ನು ಮುರಿದಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ದ್ವಿತೀಯ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಪಂಜಾಬ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ.

5 / 5
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ