IPL 2024: ದಾದಾ ದಾಖಲೆ ಮುರಿದ ಫಿಲ್ ಸಾಲ್ಟ್
TV9 Web | Updated By: ಝಾಹಿರ್ ಯೂಸುಫ್
Updated on:
May 01, 2024 | 12:24 PM
IPL 2024: ಐಪಿಎಲ್ 2024 ರಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಅತೀ ಹೆಚ್ಚು ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ. ಇದಕ್ಕೂ ಮುನ್ನ ಈ ದಾಖಲೆ ಸೌರವ್ ಗಂಗೂಲಿ ಹೆಸರಿನಲ್ಲಿತ್ತು.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 47ನೇ ಪಂದ್ಯದ ಮೂಲಕ ಫಿಲ್ ಸಾಲ್ಟ್ (Phil Salt) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
2 / 6
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡಕ್ಕೆ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಸ್ಪೋಟಕ ಆರಂಭ ಒದಗಿಸಿದ್ದರು.
3 / 6
33 ಎಸೆತಗಳನ್ನು ಎದುರಿಸಿದ ಸಾಲ್ಟ್ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 68 ರನ್ ಬಾರಿಸಿದ್ದರು. ಈ 68 ರನ್ಗಳೊಂದಿಗೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಐಪಿಎಲ್ ಸೀಸನ್ವೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಫಿಲ್ ಸಾಲ್ಟ್ ಪಾಲಾಯಿತು.
4 / 6
ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಸೌರವ್ ಗಂಗೂಲಿ ಹೆಸರಿನಲ್ಲಿತ್ತು. 2010 ರ ಐಪಿಎಲ್ನಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ 7 ಇನಿಂಗ್ಸ್ ಆಡಿದ್ದ ಗಂಗೂಲಿ 331 ರನ್ ಕಲೆಹಾಕುವ ಮೂಲಕ ಈ ದಾಖಲೆ ಬರೆದಿದ್ದರು.
5 / 6
ಇದೀಗ ಈ ಬಾರಿಯ ಐಪಿಎಲ್ನಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ 6 ಇನಿಂಗ್ಸ್ ಆಡಿರುವ ಫಿಲ್ ಸಾಲ್ಟ್ ಒಟ್ಟು 343 ರನ್ ಚಚ್ಚಿದ್ದಾರೆ. ಈ ಮೂಲಕ 14 ವರ್ಷಗಳಿಂದ ಸೌರವ್ ಗಂಗೂಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿಯುವಲ್ಲಿ ಸಾಲ್ಟ್ ಯಶಸ್ವಿಯಾಗಿದ್ದಾರೆ.
6 / 6
ಈ ಬಾರಿಯ ಐಪಿಎಲ್ನಲ್ಲಿ ಒಟ್ಟು 9 ಇನಿಂಗ್ಸ್ ಆಡಿರುವ ಫಿಲ್ ಸಾಲ್ಟ್ 217 ಎಸೆತಗಳನ್ನು ಎದುರಿಸಿ 392 ರನ್ ಕಲೆಹಾಕಿದ್ದಾರೆ. ಈ ವೇಳೆ 22 ಸಿಕ್ಸ್, 44 ಫೋರ್ಗಳೊಂದಿಗೆ ಒಟ್ಟು 4 ಅರ್ಧಶತಕಗಳನ್ನು ಸಿಡಿಸಿದ್ದಾರೆ.