IPL​ ಫ್ರಾಂಚೈಸಿಗಳಿಗೆ ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ ಸಾಲ್ಟ್​

| Updated By: ಝಾಹಿರ್ ಯೂಸುಫ್

Updated on: Dec 20, 2023 | 1:26 PM

England vs West Indies: ಫಿಲ್​ ಸಾಲ್ಟ್ ಅವರ ಈ ಭರ್ಜರಿ ಶತಕದ ನೆರವಿನಿಂದ ಈ ಪಂದ್ಯದಲ್ಲಿ ಇಂಗ್ಲೆಂಡ್​ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 267 ರನ್ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡ 15.3 ಓವರ್​ಗಳಲ್ಲಿ 192 ರನ್​ಗಳಿಗೆ ಆಲೌಟ್ ಆಗಿದೆ.

1 / 8
ಇಂಗ್ಲೆಂಡ್ ತಂಡದ ಸ್ಪೋಟಕ ಆರಂಭಿಕ ದಾಂಡಿಗ ಫಿಲ್ ಸಾಲ್ಟ್​ (Phil Salt) ಟಿ20 ಕ್ರಿಕೆಟ್​ನಲ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಐಪಿಎಲ್ (IPL 2024)​ ಹರಾಜಿನ ಮುಕ್ತಾಯದ ಬೆನ್ನಲ್ಲೇ ಎಂಬುದು ವಿಶೇಷ.

2 / 8
ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಫಿಲ್ ಸಾಲ್ಟ್​ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. 1.5 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದ ಸಾಲ್ಟ್​ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

3 / 8
ಇದರ ಬೆನ್ನಲ್ಲೇ ಅತ್ತ ವೆಸ್ಟ್ ಇಂಡೀಸ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಫಿಲ್ ಸಾಲ್ಟ್ ಬ್ಯಾಟ್ ಝಳಪಳಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಇನಿಂಗ್ಸ್​ ಮೂಲಕ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಸಾಲ್ಟ್ 57 ಎಸೆತಗಳಲ್ಲಿ 10 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 119 ರನ್ ಚಚ್ಚಿದ್ದರು.

4 / 8
ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿದ ವಿಶ್ವ ಮೂರನೇ ಬ್ಯಾಟರ್ ಹಾಗೂ ಇಂಗ್ಲೆಂಡ್ ತಂಡದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆ ಫಿಲ್ ಸಾಲ್ಟ್ ಪಾಲಾಯಿತು. ಇದಕ್ಕೂ ಮುನ್ನ ಸಾಲ್ಟ್ ವೆಸ್ಟ್ ಇಂಡೀಸ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಅಜೇಯ 109 ರನ್ ಬಾರಿಸಿ ಮಿಂಚಿದ್ದರು.

5 / 8
ಇತ್ತ ಭರ್ಜರಿ ಫಾರ್ಮ್​ನಲ್ಲಿದ್ದರೂ ಫಿಲ್ ಸಾಲ್ಟ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಆಸಕ್ತಿ ತೋರಲಿಲ್ಲ. ಇದರ ಬೆನ್ನಲ್ಲೇ ಮತ್ತೊಂದು ಶತಕ ಸಿಡಿಸುವ ಮೂಲಕ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಅಬ್ಬರಿಸಿದ್ದಾರೆ. ಈ ಮೂಲಕ ಬ್ಯಾಟ್ ಮೂಲಕವೇ ಐಪಿಎಲ್​ ಫ್ರಾಂಚೈಸಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

6 / 8
ಅಂದಹಾಗೆ ಫಿಲ್ ಸಾಲ್ಟ್​ ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದರು. ಒಟ್ಟು 9 ಇನಿಂಗ್ಸ್ ಆಡಿದ್ದ ಸಾಲ್ಟ್ 163.91 ಸ್ಟ್ರೈಕ್​ರೇಟ್​ನಲ್ಲಿ 218 ರನ್ ಬಾರಿಸಿದ್ದರು. ಇದಾಗ್ಯೂ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸದೇ ಇರುವುದು ಅಚ್ಚರಿಗೆ ಕಾರಣವಾಗಿತ್ತು.

7 / 8
ಇದೀಗ ಭರ್ಜರಿ ಶತಕದೊಂದಿಗೆ ಅಬ್ಬರಿಸುವ ಮೂಲಕ ಫಿಲ್ ಸಾಲ್ಟ್ ಐಪಿಎಲ್​ ಫ್ರಾಂಚೈಸಿಗಳ ಗಮನ ಸೆಳೆದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಐಪಿಎಲ್ ಸೀಸನ್-17 ಗೆ ಎಂಟ್ರಿಕೊಟ್ಟರು ಅಚ್ಚರಿ ಪಡಬೇಕಿಲ್ಲ.

8 / 8
ಇನ್ನು ಫಿಲ್​ ಸಾಲ್ಟ್ ಅವರ ಈ ಭರ್ಜರಿ ಶತಕದ ನೆರವಿನಿಂದ ಈ ಪಂದ್ಯದಲ್ಲಿ ಇಂಗ್ಲೆಂಡ್​ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 267 ರನ್ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡ 15.3 ಓವರ್​ಗಳಲ್ಲಿ 192 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಇಂಗ್ಲೆಂಡ್ ತಂಡ 75 ರನ್​ಗಳ ಭರ್ಜರಿ ಜಯ ಸಾಧಿಸಿದೆ.