IPL 2024: ಬ್ರಾವೊ ದಾಖಲೆ ಮುರಿದ ಪಿಯೂಷ್ ಚಾವ್ಲಾ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಮೊದಲೆರಡು ಸ್ಥಾನಗಳಲ್ಲಿ ಭಾರತೀಯ ಸ್ಪಿನ್ನರ್​ಗಳು ಕಾಣಿಸಿಕೊಂಡಿದ್ದಾರೆ. ಈ ಹಿಂದೆ ದ್ವಿತೀಯ ಸ್ಥಾನದಲ್ಲಿ ವೆಸ್ಟ್ ಇಂಡೀಸ್​ನ ಮಾಜಿ ಆಲ್​ರೌಂಡರ್ ಡೆವೊನ್ ಬ್ರಾವೊ ಇದ್ದರು. ಇದೀಗ ಬ್ರಾವೊ ಅವರನ್ನು ಹಿಂದಿಕ್ಕಿ ಪಿಯೂಷ್ ಚಾವ್ಲಾ ದ್ವಿತೀಯ ಸ್ಥಾನಕ್ಕೇರಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:May 04, 2024 | 10:25 AM

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 51ನೇ ಪಂದ್ಯದ ಮೂಲಕ ಪಿಯೂಷ್ ಚಾವ್ಲಾ (Piyush Chawla) ವಿಶೇಷ ದಾಖಲೆ ಬರೆದಿದ್ದಾರೆ. ಕೆಕೆಆರ್ ವಿರುದ್ದದ ಈ ಪಂದ್ಯದಲ್ಲಿ 3 ಓವರ್​ಗಳನ್ನು ಎಸೆದಿದ್ದ ಚಾವ್ಲಾ ಕೇವಲ 15 ರನ್ ನೀಡಿ ಒಂದು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

1 / 5
ಈ ಒಂದು ವಿಕೆಟ್​ನೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​ಗಳ ಪಟ್ಟಿಯಲ್ಲಿ ಪಿಯೂಷ್ ಚಾವ್ಲಾ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅದು ಕೂಡ ಆಲ್​ ಟೈಮ್ ಗ್ರೇಟ್ ಡ್ವೇನ್ ಬ್ರಾವೊ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

2 / 5
ಐಪಿಎಲ್​ನಲ್ಲಿ 158 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಡ್ವೇನ್ ಬ್ರಾವೊ ಒಟ್ಟು 3119 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 4360 ರನ್​ಗಳನ್ನು ನೀಡುವ ಮೂಲಕ ಒಟ್ಟು 183 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು.

3 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಪಿಯೂಷ್ ಚಾವ್ಲಾ ಯಶಸ್ವಿಯಾಗಿದ್ದಾರೆ. 188 ಐಪಿಎಲ್ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಚಾವ್ಲಾ 3784 ಎಸೆತಗಳಲ್ಲಿ 5018 ರನ್ ನೀಡಿ ಒಟ್ಟು 184 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯುಜ್ವೇಂದ್ರ ಚಹಲ್. 154 ಇನಿಂಗ್ಸ್​ಗಳಲ್ಲಿ 3401 ಎಸೆತಗಳನ್ನು ಎಸೆದಿರುವ ಚಹಲ್ 4424 ರನ್ ನೀಡಿದ್ದಾರೆ. ಈ ವೇಳೆ 200 ವಿಕೆಟ್​ಗಳನ್ನು ಕಬಳಿಸಿ ದಾಖಲೆ ಬರೆದಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ದ್ವಿಶತಕ ವಿಕೆಟ್​ಗಳ ಸಾಧನೆ ಮಾಡಿದ ಏಕೈಕ ಬೌಲರ್​ ಆಗಿ ಗುರುತಿಸಿಕೊಂಡಿದ್ದಾರೆ.

5 / 5

Published On - 10:22 am, Sat, 4 May 24

Follow us
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್