IPL 2024: ಐಪಿಎಲ್ನಿಂದ ಮೂವರು ಔಟ್: ಮತ್ತಿಬ್ಬರು ಡೌಟ್
TV9 Web | Updated By: ಝಾಹಿರ್ ಯೂಸುಫ್
Updated on:
Mar 02, 2024 | 3:28 PM
IPL 2024: IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಮೊದಲಾರ್ಧದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದ್ದು, ಉಳಿದ ಮ್ಯಾಚ್ಗಳ ದಿನಾಂಕವನ್ನು ಲೋಕಸಭಾ ಚುನಾವಣಾ ದಿನಾಂಕದ ಘೋಷಣೆಯ ಬಳಿಕ ನಿಗದಿ ಮಾಡಲಾಗುತ್ತದೆ.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ವಿಶ್ವದ ಶ್ರೀಮಂತ ಲೀಗ್ನಿಂದ ಈಗಾಗಲೇ ಮೂವರು ಆಟಗಾರರು ಹೊರಬಿದ್ದಿದ್ದಾರೆ. ಇನ್ನೂ ಕೆಲ ಆಟಗಾರರು ಗಾಯದಿಂದ ಬಳಲುತ್ತಿದ್ದು, ಅವರ ಪಾಲ್ಗೊಳ್ಳುವಿಕೆಯ ಬಗ್ಗೆ ಖಚಿತತೆಯಿಲ್ಲ. ಹಾಗಿದ್ರೆ ಐಪಿಎಲ್ನಿಂದ ಹೊರಬಿದ್ದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...
2 / 6
1- ಮಾರ್ಕ್ ವುಡ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಾರ್ಕ್ ವುಡ್ ಐಪಿಎಲ್ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವೇಗಿ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಬದಲಿ ಆಟಗಾರನಾಗಿ ವೆಸ್ಟ್ ಇಂಡೀಸ್ನ ಶಮರ್ ಜೋಸೆಫ್ ಆಯ್ಕೆಯಾಗಿದ್ದಾರೆ.
3 / 6
2- ಗಸ್ ಅಟ್ಕಿನ್ಸನ್: ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಕೆಲಸದ ಒತ್ತಡದ ಕಾರಣ ಅಟ್ಕಿನ್ಸನ್ ಕೂಡ ಐಪಿಎಲ್ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಶ್ರೀಲಂಕಾ ತಂಡದ ವೇಗಿ ದುಷ್ಮಂತ ಚಮೀರಾರನ್ನು ಕೆಕೆಆರ್ ಆಯ್ಕೆ ಮಾಡಿದೆ.
4 / 6
3- ಮೊಹಮ್ಮದ್ ಶಮಿ: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಈ ಬಾರಿಯ ಐಪಿಎಲ್ನಲ್ಲಿ ಕಣಕ್ಕಿಳಿಸುವುದಿಲ್ಲ. ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ಬೌಲರ್ ಆಗಿರುವ ಶಮಿ ಹಿಮ್ಮಡಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಗುಜರಾತ್ ಟೈಟಾನ್ಸ್ ಬದಲಿ ಆಟಗಾರನನ್ನು ಹೆಸರಿಸಿಲ್ಲ.
5 / 6
4- ಟಾಮ್ ಕರನ್: ಆರ್ಸಿಬಿ ತಂಡದಲ್ಲಿರುವ ಇಂಗ್ಲೆಂಡ್ ಆಲ್ರೌಂಡರ್ ಟಾಮ್ ಕರನ್ ಕೂಡ ಈ ಬಾರಿಯ ಐಪಿಎಲ್ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ ಕರನ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಐಪಿಎಲ್ನಿಂದ ಹಿಂದೆ ಸರಿಯುವ ಸಾಧ್ಯತೆಯಿದೆ.
6 / 6
ಇನ್ನು ರಶೀದ್ ಖಾನ್ ಹಾಗೂ ಸೂರ್ಯಕುಮಾರ್ ಯಾದವ್ ಕೂಡ ಫಿಟ್ನೆಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಾಗ್ಯೂ ಸೂರ್ಯಕುಮಾರ್ ಇದೀಗ ಅಭ್ಯಾಸವನ್ನು ಶುರು ಮಾಡಿಕೊಂಡಿದ್ದು, ಹೀಗಾಗಿ ಐಪಿಎಲ್ಗೆ ವೇಳೆಗೆ ಸಂಪೂರ್ಣ ಫಿಟ್ನೆಸ್ ಸಾಧಿಸುವ ನಿರೀಕ್ಷೆಯಿದೆ.