ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) ಪ್ಲೇಆಫ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಮಂಗಳವಾರ ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್ರೈಡರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ಗೆ ಎಂಟ್ರಿ ಕೊಡಲಿದೆ.
ಅಂದರೆ ಐಪಿಎಲ್ ನಿಯಮದ ಪ್ರಕಾರ, ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ 2 ತಂಡಗಳು ಮೊದಲ ಕ್ವಾಲಿಫೈಯರ್ ಆಡಲಿದೆ. ಅದರಂತೆ ಮೇ 21 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ಮತ್ತು ಎಸ್ಆರ್ಹೆಚ್ ತಂಡಗಳು ಮುಖಾಮುಖಿಗಲಿದೆ. ಈ ಪಂದ್ಯದಲ್ಲಿ ಜಯಿಸುವ ತಂಡ ನೇರವಾಗಿ ಫೈನಲ್ಗೆ ಪ್ರವೇಶಿಸಲಿದೆ.
ಕೆಕೆಆರ್ ಮತ್ತು ಎಸ್ಆರ್ಹೆಚ್ ನಡುವಣ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲುವ ತಂಡಕ್ಕೆ ಮತ್ತೊಂದು ಚಾನ್ಸ್ ಇರಲಿದೆ. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡದ ವಿರುದ್ಧ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.
2ನೇ ಕ್ವಾಲಿಫೈಯರ್ನಲ್ಲಿ ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್ನಲ್ಲಿ ಗೆದ್ದು ಫೈನಲ್ಗೆ ಪ್ರವೇಶಿಸಿರುವ ಟೀಮ್ ಜೊತೆ ಪ್ರಶಸ್ತಿಗಾಗಿ ಸೆಣಸಲಿದೆ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡ ಐಪಿಎಲ್ನಿಂದ ಹೊರಬೀಳುವುದಿಲ್ಲ. ಅಲ್ಲದೆ ಫೈನಲ್ಗೇರಲು ಮತ್ತೊಂದು ಅವಕಾಶವನ್ನು ಪಡೆಯಲಿದೆ.
ಆದರೆ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ಟೀಮ್ ಐಪಿಎಲ್ನಿಂದ ಹೊರಬೀಳಲಿದೆ. ಅಂದರೆ ಮೇ 22 ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್ನಲ್ಲಿ ಸೋಲುವ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ. ಹೀಗಾಗಿ ಆರ್ಸಿಬಿ ಪಾಲಿಗೆ ಮುಂದಿನ ಮ್ಯಾಚ್ ಕೂಡ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.