IPL 2024: ಗೆದ್ದರೂ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಉಳಿದ RCB
TV9 Web | Updated By: ಝಾಹಿರ್ ಯೂಸುಫ್
Updated on:
Apr 29, 2024 | 7:00 AM
IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ಆರ್ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಈ ಮೂರು ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಸಂಪಾದಿಸಿರುವ ಆರ್ಸಿಬಿ ಪಾಯೊಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ.
1 / 11
IPL 2024: ಐಪಿಎಲ್ 2024 ರ 46 ಪಂದ್ಯಗಳು ಮುಗಿದಿವೆ. ಈಗಾಗಲೇ ಆರ್ಸಿಬಿ ತಂಡವು 10 ಪಂದ್ಯಗಳನ್ನಾಡಿದ್ದು, ಈ ವೇಳೆ 3 ಮ್ಯಾಚ್ಗಳಲ್ಲಿ ಜಯ ಸಾಧಿಸಿ 6 ಅಂಕಗಳನ್ನು ಪಡೆದುಕೊಂಡಿದೆ. ಇದಾಗ್ಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಆರ್ಸಿಬಿ ತಂಡದ ನೆಟ್ ರನ್ ರೇಟ್. 6 ಅಂಕಗಳನ್ನು ಹೊಂದಿರುವ ಇತರೆ ತಂಡಗಳಿಗಿಂತ ಆರ್ಸಿಬಿ ಕಡಿಮೆ ನೆಟ್ ರನ್ ರೇಟ್ ಹೊಂದಿದ್ದು, ಹೀಗಾಗಿ ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ. ಅದರಂತೆ ನೂತನ ಪಾಯಿಂಟ್ಸ್ ಟೇಬಲ್ ಈ ಕೆಳಗಿನಂತಿದೆ...
2 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.694.
3 / 11
8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +0.972 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
4 / 11
9 ಪಂದ್ಯಗಳಲ್ಲಿ 5 ಜಯ ಹಾಗೂ 4 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 3ನೇ ಸ್ಥಾನದಲ್ಲಿದೆ. ಒಟ್ಟು 10 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.810.
5 / 11
ಸನ್ರೈಸರ್ಸ್ ಹೈದರಾಬಾದ್ ತಂಡವು 9 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.075.
6 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಆಡಿರುವ 9 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 10 ಅಂಕಗಳೊಂದಿಗೆ +0.059 ನೆಟ್ ರನ್ ರೇಟ್ ಹೊಂದಿದೆ.
7 / 11
10 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.276 ನೆಟ್ ರನ್ ರೇಟ್ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
8 / 11
10 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 8 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.113.
9 / 11
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.187.
10 / 11
9 ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.261.
11 / 11
ಆರ್ಸಿಬಿ ತಂಡವು ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 3 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.415.