IPL 2024: ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ KKR
TV9 Web | Updated By: ಝಾಹಿರ್ ಯೂಸುಫ್
Updated on:
May 06, 2024 | 7:01 AM
IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 17ನೇ ಸೀಸನ್ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇದೀಗ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಇದಕ್ಕೂ ಮುನ್ನ ಕೆಕೆಆರ್ ತಂಡವು ದ್ವಿತೀಯ ಸ್ಥಾನದಲ್ಲಿತ್ತು. ಇನ್ನು ಮೂರನೇ ಸ್ಥಾನದಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು 5ನೇ ಸ್ಥಾನಕ್ಕೆ ಕುಸಿದಿದೆ.
1 / 11
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 54ನೇ ಪಂದ್ಯದ ಮುಕ್ತಾಯದ ವೇಳೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಕೆಕೆಆರ್ ತಂಡವು ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿದೆ. ಅದರಂತೆ ನೂತನ ಪಾಯಿಂಟ್ಸ್ ಟೇಬಲ್ ಈ ಕೆಳಗಿನಂತಿದೆ...
2 / 11
ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 11 ಪಂದ್ಯಗಳನ್ನಾಡಿದ್ದು, ಈ ವೇಳೆ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ +1.453 ನೆಟ್ ರನ್ ರೇಟ್ ಹೊಂದುವ ಮೂಲಕ ಅಗ್ರಸ್ಥಾನಕ್ಕೇರಿದೆ.
3 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.622.
4 / 11
11 ಪಂದ್ಯಗಳಲ್ಲಿ 6 ಜಯ ಹಾಗೂ 5 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 3ನೇ ಸ್ಥಾನದಲ್ಲಿದೆ. ಒಟ್ಟು 12 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.700.
5 / 11
ಸನ್ರೈಸರ್ಸ್ ಹೈದರಾಬಾದ್ ತಂಡವು 10 ಪಂದ್ಯಗಳಲ್ಲಿ 6 ಜಯ ಸಾಧಿಸಿದ್ದು, ಇದೀಗ 12 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.072.
6 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕಿಳಿದಿದೆ. ಆಡಿರುವ 11 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 12 ಅಂಕಗಳೊಂದಿಗೆ -0.371 ನೆಟ್ ರನ್ ರೇಟ್ ಹೊಂದಿದೆ.
7 / 11
11 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.442 ನೆಟ್ ರನ್ ರೇಟ್ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
8 / 11
ಆರ್ಸಿಬಿ ತಂಡವು ಇದುವರೆಗೆ 11 ಪಂದ್ಯಗಳನ್ನಾಡಿದ್ದು, ಇದರಲ್ಲಿ 4 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 8 ಅಂಕಗಳನ್ನು ಸಂಪಾದಿಸಿರುವ ಆರ್ಸಿಬಿ ಪಾಯಿಂಟ್ಸ್ ಟೇಬಲ್ನಲ್ಲಿ 7ನೇ ಸ್ಥಾನಕ್ಕೇರಿದೆ. ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.049.
9 / 11
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 11 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ 0.187.
10 / 11
11 ಮ್ಯಾಚ್ಗಳಲ್ಲಿ ಕೇವಲ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 8 ಅಂಕಗಳನ್ನು ಹೊಂದಿದ್ದು, ಈ ಮೂಲಕ 9ನೇ ಸ್ಥಾನಕ್ಕೆ ಕುಸಿದಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.320.
11 / 11
11 ಪಂದ್ಯಗಳಲ್ಲಿ ಕೇವಲ 3 ಮ್ಯಾಚ್ಗಳಲ್ಲಿ ಮಾತ್ರ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.356.
Published On - 7:00 am, Mon, 6 May 24