IPL 2024: 8 ಸೋಲುಗಳೊಂದಿಗೆ 9ನೇ ಸ್ಥಾನಕ್ಕೆ ಕುಸಿದ ಮುಂಬೈ ಇಂಡಿಯನ್ಸ್
TV9 Web | Updated By: ಝಾಹಿರ್ ಯೂಸುಫ್
Updated on:
May 04, 2024 | 7:12 AM
IPL 2024 Points Table: ಐಪಿಎಲ್ನ 51 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡರೆ, ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಕೆಕೆಆರ್ ತಂಡವು 2ನೇ ಸ್ಥಾನಕ್ಕೇರಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಮೂರನೇ ಸ್ಥಾನದಲ್ಲಿದ್ದರೆ, ಆರ್ಸಿಬಿ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ.
1 / 11
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 51 ಪಂದ್ಯಗಳು ಪೂರ್ಣಗೊಂಡಿದೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲೂ ಕೆಲ ಬದಲಾವಣೆಯಾಗಿದೆ. ಅದರಂತೆ ನೂತನ ಪಾಯಿಂಟ್ಸ್ ಟೇಬಲ್ ಈ ಕೆಳಗಿನಂತಿದೆ...
2 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.622.
3 / 11
10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 14 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.098 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
4 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಆಡಿರುವ 10 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 12 ಅಂಕಗಳೊಂದಿಗೆ +0.094 ನೆಟ್ ರನ್ ರೇಟ್ ಹೊಂದಿದೆ.
5 / 11
ಸನ್ರೈಸರ್ಸ್ ಹೈದರಾಬಾದ್ ತಂಡವು 10 ಪಂದ್ಯಗಳಲ್ಲಿ 6 ಜಯ ಸಾಧಿಸಿದ್ದು, ಇದೀಗ 12 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.072.
6 / 11
10 ಪಂದ್ಯಗಳಲ್ಲಿ 5 ಜಯ ಹಾಗೂ 5 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ನೇ ಸ್ಥಾನದಲ್ಲಿದೆ. ಒಟ್ಟು 10 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.627.
7 / 11
11 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.442 ನೆಟ್ ರನ್ ರೇಟ್ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
8 / 11
ಪಂಜಾಬ್ ಕಿಂಗ್ಸ್ ತಂಡವು 7ನೇ ಸ್ಥಾನದಲ್ಲಿದ್ದು, ಆಡಿರುವ 10 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.062.
9 / 11
10 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 8 ಅಂಕಗಳನ್ನು ಹೊಂದಿದ್ದು, ಈ ಮೂಲಕ 8ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.113.
10 / 11
11 ಪಂದ್ಯಗಳಲ್ಲಿ ಕೇವಲ 3 ಮ್ಯಾಚ್ಗಳಲ್ಲಿ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.356.
11 / 11
ಆರ್ಸಿಬಿ ತಂಡವು ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ನಲ್ಲಿ ಸೋತಿದೆ. ಇನ್ನು ಗೆದ್ದಿರುವ 3 ಮ್ಯಾಚ್ಗಳಿಂದ 6 ಅಂಕಗಳನ್ನು ಸಂಪಾದಿಸಿರುವ ಆರ್ಸಿಬಿ ಪಾಯಿಂಟ್ಸ್ ಟೇಬಲ್ನಲ್ಲಿ 10ನೇ ಸ್ಥಾನದಲ್ಲಿದೆ. ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.415.
Published On - 7:10 am, Sat, 4 May 24