IPL 2024: CSK ಗೆ ಸೋಲುಣಿಸಿ ಒಂದು ಸ್ಥಾನ ಮೇಲೇರಿದ ಪಂಜಾಬ್ ಕಿಂಗ್ಸ್
TV9 Web | Updated By: ಝಾಹಿರ್ ಯೂಸುಫ್
Updated on:
May 02, 2024 | 7:01 AM
IPL 2024 Points Table: ಐಪಿಎಲ್ನ 48 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಪಂಜಾಬ್ ಕಿಂಗ್ಸ್ ತಂಡವು 7ನೇ ಸ್ಥಾನಕ್ಕೇರಿದೆ. ಹಾಗೆಯೇ ಆರ್ಸಿಬಿ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ.
1 / 11
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 49 ಪಂದ್ಯಗಳು ಪೂರ್ಣಗೊಂಡಿದೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲೂ ಕೆಲ ಬದಲಾವಣೆಯಾಗಿದೆ. ಅದರಂತೆ ನೂತನ ಪಾಯಿಂಟ್ಸ್ ಟೇಬಲ್ ಈ ಕೆಳಗಿನಂತಿದೆ...
2 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.622.
3 / 11
10 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 14 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.098 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
4 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಆಡಿರುವ 10 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 12 ಅಂಕಗಳೊಂದಿಗೆ +0.094 ನೆಟ್ ರನ್ ರೇಟ್ ಹೊಂದಿದೆ.
5 / 11
10 ಪಂದ್ಯಗಳಲ್ಲಿ 5 ಜಯ ಹಾಗೂ 5 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ನೇ ಸ್ಥಾನದಲ್ಲಿದೆ. ಒಟ್ಟು 10 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.627.
6 / 11
ಸನ್ರೈಸರ್ಸ್ ಹೈದರಾಬಾದ್ ತಂಡವು 10 ಪಂದ್ಯಗಳಲ್ಲಿ 6 ಜಯ ಸಾಧಿಸಿದ್ದು, ಇದೀಗ 12 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.072.
7 / 11
11 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.442 ನೆಟ್ ರನ್ ರೇಟ್ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
8 / 11
ಪಂಜಾಬ್ ಕಿಂಗ್ಸ್ ತಂಡವು 7ನೇ ಸ್ಥಾನದಲ್ಲಿದ್ದು, ಆಡಿರುವ 10 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.062.
9 / 11
10 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 8 ಅಂಕಗಳನ್ನು ಹೊಂದಿದ್ದು, ಈ ಮೂಲಕ 8ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.113.
10 / 11
11 ಪಂದ್ಯಗಳಲ್ಲಿ ಕೇವಲ 3 ಮ್ಯಾಚ್ಗಳಲ್ಲಿ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.356.
11 / 11
ಆರ್ಸಿಬಿ ತಂಡವು ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ನಲ್ಲಿ ಸೋತಿದೆ. ಇನ್ನು ಗೆದ್ದಿರುವ 3 ಮ್ಯಾಚ್ಗಳಿಂದ 6 ಅಂಕಗಳನ್ನು ಸಂಪಾದಿಸಿರುವ ಆರ್ಸಿಬಿ ಪಾಯಿಂಟ್ಸ್ ಟೇಬಲ್ನಲ್ಲಿ 10ನೇ ಸ್ಥಾನದಲ್ಲಿದೆ. ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.415.