ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ತಂಡ ಅಂಕ ಪಟ್ಟಿಯಲ್ಲಿ 2 ಸ್ಥಾನ ಮೇಲೇರಿದೆ. ಇದಕ್ಕೂ ಮುನ್ನ 7ನೇ ಸ್ಥಾನದಲ್ಲಿದ್ದ ಫಾಫ್ ಡುಪ್ಲೆಸಿಸ್ ಪಡೆ ಇದೀಗ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ ಪ್ಲೇಆಫ್ ಹಂತಕ್ಕೇರುವ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಇನ್ನು ನೂತನ ಪಾಯಿಂಟ್ಸ್ ಟೇಬಲ್ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...
ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 18 ಅಂಕಗಳೊಂದಿಗೆ +1.428 ನೆಟ್ ರನ್ ರೇಟ್ ಹೊಂದುವ ಮೂಲಕ ಅಗ್ರಸ್ಥಾನದಲ್ಲಿದೆ. ಈ ಹದಿನೆಂಟು ಅಂಕಗಳೊಂದಿಗೆ ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿದೆ.
ರಾಜಸ್ಥಾನ್ ರಾಯಲ್ಸ್ ಇದುವರೆಗೆ 12 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.349.
13 ಪಂದ್ಯಗಳಲ್ಲಿ 7 ಜಯ ಹಾಗೂ 6 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 3ನೇ ಸ್ಥಾನದಲ್ಲಿದೆ. ಒಟ್ಟು 14 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.528.
ಸನ್ರೈಸರ್ಸ್ ಹೈದರಾಬಾದ್ ತಂಡವು 12 ಪಂದ್ಯಗಳಲ್ಲಿ 7 ಜಯ ಸಾಧಿಸಿದ್ದು, ಇದೀಗ 14 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.406.
ಆರ್ಸಿಬಿ ತಂಡವು ಇದುವರೆಗೆ 13 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳನ್ನು ಸಂಪಾದಿಸಿರುವ ಆರ್ಸಿಬಿ ಪಾಯಿಂಟ್ಸ್ ಟೇಬಲ್ನಲ್ಲಿ 5ನೇ ಸ್ಥಾನಕ್ಕೇರಿದೆ. ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.387.
13 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.482 ನೆಟ್ ರನ್ ರೇಟ್ನೊಂದಿಗೆ 12 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕಿಳಿದಿದೆ. ಆಡಿರುವ 12 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 12 ಅಂಕಗಳೊಂದಿಗೆ -0.769 ನೆಟ್ ರನ್ ರೇಟ್ ಹೊಂದಿದೆ.
12 ಮ್ಯಾಚ್ಗಳಲ್ಲಿ ಕೇವಲ 5 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 10 ಅಂಕಗಳನ್ನು ಹೊಂದಿದ್ದು, ಈ ಮೂಲಕ 8ನೇ ಸ್ಥಾನದಲ್ಲಿ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.063.
13 ಪಂದ್ಯಗಳಲ್ಲಿ ಕೇವಲ 4 ಮ್ಯಾಚ್ಗಳಲ್ಲಿ ಮಾತ್ರ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 8 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.271.
ಪಂಜಾಬ್ ಕಿಂಗ್ಸ್ ತಂಡವು 10ನೇ ಸ್ಥಾನದಲ್ಲಿದ್ದು, ಆಡಿರುವ 12 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.423.
Published On - 7:31 am, Mon, 13 May 24