IPL 2024: ಅಂಕ ಪಟ್ಟಿಯಲ್ಲಿ 2 ಸ್ಥಾನ ಮೇಲೇರಿದ RCB
IPL 2024 Points Table: ಐಪಿಎಲ್ ಸೀಸನ್ 17 ರ 62 ಪಂದ್ಯಗಳ ಮುಕ್ತಾಯದ ವೇಳೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪ್ಲೇಆಫ್ಗೆ ಪ್ರವೇಶಿಸಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಎಲಿಮಿನೇಟರ್ ಆಗಿವೆ. ಇನ್ನು ಆರ್ಸಿಬಿ, ಡೆಲ್ಲಿ ಕ್ಯಾಪಿಟಲ್ಸ್, ಸಿಎಸ್ಕೆ, ಎಸ್ಆರ್ಹೆಚ್, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವೆ ಪ್ಲೇಆಫ್ ರೇಸ್ ಮುಂದುವರೆದಿದೆ.
1 / 11
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ತಂಡ ಅಂಕ ಪಟ್ಟಿಯಲ್ಲಿ 2 ಸ್ಥಾನ ಮೇಲೇರಿದೆ. ಇದಕ್ಕೂ ಮುನ್ನ 7ನೇ ಸ್ಥಾನದಲ್ಲಿದ್ದ ಫಾಫ್ ಡುಪ್ಲೆಸಿಸ್ ಪಡೆ ಇದೀಗ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ ಪ್ಲೇಆಫ್ ಹಂತಕ್ಕೇರುವ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಇನ್ನು ನೂತನ ಪಾಯಿಂಟ್ಸ್ ಟೇಬಲ್ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...
2 / 11
ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 18 ಅಂಕಗಳೊಂದಿಗೆ +1.428 ನೆಟ್ ರನ್ ರೇಟ್ ಹೊಂದುವ ಮೂಲಕ ಅಗ್ರಸ್ಥಾನದಲ್ಲಿದೆ. ಈ ಹದಿನೆಂಟು ಅಂಕಗಳೊಂದಿಗೆ ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿದೆ.
3 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 12 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.349.
4 / 11
13 ಪಂದ್ಯಗಳಲ್ಲಿ 7 ಜಯ ಹಾಗೂ 6 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 3ನೇ ಸ್ಥಾನದಲ್ಲಿದೆ. ಒಟ್ಟು 14 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.528.
5 / 11
ಸನ್ರೈಸರ್ಸ್ ಹೈದರಾಬಾದ್ ತಂಡವು 12 ಪಂದ್ಯಗಳಲ್ಲಿ 7 ಜಯ ಸಾಧಿಸಿದ್ದು, ಇದೀಗ 14 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.406.
6 / 11
ಆರ್ಸಿಬಿ ತಂಡವು ಇದುವರೆಗೆ 13 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳನ್ನು ಸಂಪಾದಿಸಿರುವ ಆರ್ಸಿಬಿ ಪಾಯಿಂಟ್ಸ್ ಟೇಬಲ್ನಲ್ಲಿ 5ನೇ ಸ್ಥಾನಕ್ಕೇರಿದೆ. ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.387.
7 / 11
13 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.482 ನೆಟ್ ರನ್ ರೇಟ್ನೊಂದಿಗೆ 12 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ.
8 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕಿಳಿದಿದೆ. ಆಡಿರುವ 12 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 12 ಅಂಕಗಳೊಂದಿಗೆ -0.769 ನೆಟ್ ರನ್ ರೇಟ್ ಹೊಂದಿದೆ.
9 / 11
12 ಮ್ಯಾಚ್ಗಳಲ್ಲಿ ಕೇವಲ 5 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 10 ಅಂಕಗಳನ್ನು ಹೊಂದಿದ್ದು, ಈ ಮೂಲಕ 8ನೇ ಸ್ಥಾನದಲ್ಲಿ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.063.
10 / 11
13 ಪಂದ್ಯಗಳಲ್ಲಿ ಕೇವಲ 4 ಮ್ಯಾಚ್ಗಳಲ್ಲಿ ಮಾತ್ರ ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 8 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.271.
11 / 11
ಪಂಜಾಬ್ ಕಿಂಗ್ಸ್ ತಂಡವು 10ನೇ ಸ್ಥಾನದಲ್ಲಿದ್ದು, ಆಡಿರುವ 12 ಪಂದ್ಯಗಳಲ್ಲಿ 4 ಗೆಲುವು ಸಾಧಿಸಿ 8 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.423.
Published On - 7:31 am, Mon, 13 May 24