IPL 2024: ಅಗ್ರಸ್ಥಾನಕ್ಕೇರಿದ ರಾಜಸ್ಥಾನ್ ರಾಯಲ್ಸ್: RCB ಪರಿಸ್ಥಿತಿ ಅಧೋಗತಿ
IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 16 ಪಂದ್ಯಗಳ ಮುಕ್ತಾಯದ ವೇಳೆಗೆ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೋಲಿಲ್ಲದ ಸರದಾರರಾಗಿ ಮುಂದುವರೆದಿದ್ದಾರೆ. ಅಂದರೆ ಆಡಿರುವ ಎಲ್ಲಾ ಮ್ಯಾಚ್ಗಳಲ್ಲೂ ಉಭಯ ತಂಡಗಳು ಗೆಲುವು ದಾಖಲಿಸಿದ್ದು, ಈ ಮೂಲಕ IPL 2024 ರ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದೆ.