ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರ 35 ಪಂದ್ಯಗಳು ಮುಕ್ತಾಯಗೊಂಡಿದೆ. ಈ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿರುವುದು ರಾಜಸ್ಥಾನ್ ರಾಯಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು. ಮೊದಲಾರ್ಧದಲ್ಲಿ ಆರ್ಆರ್ 6 ಗೆಲುವು ದಾಖಲಿಸಿದರೆ, ಎಸ್ಆರ್ಹೆಚ್ 5 ಜಯ ಸಾಧಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದೆ. ಅದರಂತೆ ಐಪಿಎಲ್ನ ನೂತನ ಪಾಯಿಂಟ್ಸ್ ಟೇಬಲ್ ಈ ಕೆಳಗಿನಂತಿದೆ...
ರಾಜಸ್ಥಾನ್ ರಾಯಲ್ಸ್ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.677.
ಸನ್ರೈಸರ್ಸ್ ಹೈದರಾಬಾದ್ ತಂಡವು 7 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.914.
7 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.206 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.529.
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಆಡಿರುವ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 8 ಅಂಕಗಳೊಂದಿಗೆ +0.123 ನೆಟ್ ರನ್ ರೇಟ್ ಹೊಂದಿದೆ.
ಏಳು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.133.
8 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.477 ನೆಟ್ ರನ್ ರೇಟ್ನೊಂದಿಗೆ 6 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
8 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 6ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.055.
ಪಂಜಾಬ್ ಕಿಂಗ್ಸ್ ತಂಡವು 9ನೇ ಸ್ಥಾನದಲ್ಲಿದ್ದು, ಆಡಿರುವ 8 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.292.
ಆರ್ಸಿಬಿ ತಂಡವು ಇದುವರೆಗೆ 8 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.046.
Published On - 6:55 am, Sun, 21 April 24