IPL 2024: ಅಂಕಪಟ್ಟಿಯಲ್ಲಿ 3 ಸ್ಥಾನ ಮೇಲೇರಿದ ಡೆಲ್ಲಿ ಕ್ಯಾಪಿಟಲ್ಸ್
IPL 2024 Points Table: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದೆ. ಗುಜರಾತ್ ಟೈಟಾನ್ಸ್ ತಂಡದ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವನ್ನು ಕೇವಲ 89 ರನ್ಗಳಿಗೆ ಆಲೌಟ್ ಮಾಡುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯಶಸ್ವಿಯಾಗಿದೆ.