IPL 2024: ಅಂಕಪಟ್ಟಿಯಲ್ಲಿ 3 ಸ್ಥಾನ ಮೇಲೇರಿದ ಡೆಲ್ಲಿ ಕ್ಯಾಪಿಟಲ್ಸ್
TV9 Web | Updated By: ಝಾಹಿರ್ ಯೂಸುಫ್
Updated on:
Apr 18, 2024 | 7:50 AM
IPL 2024 Points Table: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದೆ. ಗುಜರಾತ್ ಟೈಟಾನ್ಸ್ ತಂಡದ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವನ್ನು ಕೇವಲ 89 ರನ್ಗಳಿಗೆ ಆಲೌಟ್ ಮಾಡುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯಶಸ್ವಿಯಾಗಿದೆ.
1 / 12
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 32ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕಪಟ್ಟಿಯಲ್ಲಿ ಮೂರು ಸ್ಥಾನ ಮೇಲೇರಿದೆ. ಅಹಮದಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 17.3 ಓವರ್ಗಳಲ್ಲಿ 89 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು 8.5 ಓವರ್ಗಳಲ್ಲಿ ಚೇಸ್ ಮಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ನೆಟ್ ರನ್ ರೇಟ್ ಪಡೆಯುವಲ್ಲಿ ಯಶಸ್ವಿಯಾಗಿದೆ.
2 / 12
ಈ ನೆಟ್ ರನ್ ರೇಟ್ ನೆರವಿನೊಂದಿಗೆ ಒಟ್ಟು 6 ಅಂಕಗಳೊಂದಿಗೆ ಗುಜರಾತ್ ಟೈಟಾನ್ಸ್ ತಂಡವನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಿದೆ. ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9ನೇ ಸ್ಥಾನದಲ್ಲಿತ್ತು. ಇದೀಗ ಭರ್ಜರಿ ಗೆಲುವಿನೊಂದಿಗೆ 3 ಸ್ಥಾನ ಮೇಲೇರುವಲ್ಲಿ ಯಶಸ್ವಿಯಾಗಿದೆ. ಅದರಂತೆ ನೂತನ ಅಂಕಪಟ್ಟಿ ಈ ಕೆಳಗಿನಂತಿದೆ...
3 / 12
ರಾಜಸ್ಥಾನ್ ರಾಯಲ್ಸ್ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.677.
4 / 12
7 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.206 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
5 / 12
7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.529.
6 / 12
ಸನ್ರೈಸರ್ಸ್ ಹೈದರಾಬಾದ್ ತಂಡವು 7 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.914.
7 / 12
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಆಡಿರುವ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 8 ಅಂಕಗಳೊಂದಿಗೆ +0.123 ನೆಟ್ ರನ್ ರೇಟ್ ಹೊಂದಿದೆ.
8 / 12
8 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.477 ನೆಟ್ ರನ್ ರೇಟ್ನೊಂದಿಗೆ 6 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9 / 12
8 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 6ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.055.
10 / 12
ಪಂಜಾಬ್ ಕಿಂಗ್ಸ್ ತಂಡವು 9ನೇ ಸ್ಥಾನದಲ್ಲಿದ್ದು, ಆಡಿರುವ 8 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.292.
11 / 12
ಏಳು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.133.
12 / 12
ಆರ್ಸಿಬಿ ತಂಡವು ಇದುವರೆಗೆ 8 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.046.