IPL 2024 Points Table: ಟಾಪ್-4 ಗೆ ಎಂಟ್ರಿ ಕೊಟ್ಟ LSG
TV9 Web | Updated By: ಝಾಹಿರ್ ಯೂಸುಫ್
Updated on:
Apr 24, 2024 | 7:09 AM
IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) ಮೊದಲ ಸುತ್ತಿನ ಮುಕ್ತಾಯದ ಬೆನ್ನಲ್ಲೇ ಸಿಎಸ್ಕೆ ತಂಡಕ್ಕೆ ಸೋಲುಣಿಸಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಂಡಿದೆ. ಮತ್ತೊಂದೆಡೆ ಏಕೈಕ ಗೆಲುವು ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲೇ ಉಳಿದಿದೆ.
1 / 11
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2024) ಈವರೆಗೆ 42 ಪಂದ್ಯಗಳು ಮುಗಿದಿವೆ. ದ್ವಿತೀಯ ಸುತ್ತಿನ ಪಂದ್ಯಗಳು ಶುರುವಾಗುತ್ತಿದ್ದಂತೆ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬರಲಾರಂಭಿಸಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಆರ್ಸಿಬಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅದರಂತೆ ಐಪಿಎಲ್ನ ಹೊಸ ಪಾಯಿಂಟ್ಸ್ ಟೇಬಲ್ ಈ ಕೆಳಗಿನಂತಿದೆ...
2 / 11
ರಾಜಸ್ಥಾನ್ ರಾಯಲ್ಸ್ ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.694.
3 / 11
8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +0.972 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
4 / 11
ಸನ್ರೈಸರ್ಸ್ ಹೈದರಾಬಾದ್ ತಂಡವು 8 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.577.
5 / 11
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 10 ಅಂಕಗಳೊಂದಿಗೆ +0.148 ನೆಟ್ ರನ್ ರೇಟ್ ಹೊಂದಿದೆ.
6 / 11
8 ಪಂದ್ಯಗಳಲ್ಲಿ 4 ಜಯ ಹಾಗೂ 4 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 6ನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.415.
7 / 11
9 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.974.
8 / 11
9 ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.261.
9 / 11
10 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು +0.059 ನೆಟ್ ರನ್ ರೇಟ್ನೊಂದಿಗೆ 10 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
10 / 11
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.187.
11 / 11
ಆರ್ಸಿಬಿ ತಂಡವು ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 4 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.721.