IPL 2024 Points Table: ಟಾಪ್-3 ಸ್ಥಾನಗಳಲ್ಲಿ RR, KKR, CSK
IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 29 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮೊದಲೆರಡು ಸ್ಥಾನಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಆದರೆ ಮತ್ತೊಂದೆಡೆ ಕಳಪೆ ಪ್ರದರ್ಶನ ನೀಡುತ್ತಿರುವ ಆರ್ಸಿಬಿ ಕೊನೆಯ ಸ್ಥಾನಕ್ಕಿಳಿದಿದೆ.
Updated on: Apr 15, 2024 | 6:49 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರ ಮೊದಲ ಸುತ್ತಿನಲ್ಲಿ 29 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಅಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆ ಕಂಡು ಬಂದಿದೆ. ಈ ಬಾರಿಯ ಪಾಯಿಂಟ್ಸ್ ಟೇಬಲ್ನ ಟಾಪ್-3 ಸ್ಥಾನಗಳಲ್ಲಿ ಆರ್ಆರ್, ಕೆಕೆಆರ್ ಹಾಗೂ ಸಿಎಸ್ಕೆ ತಂಡಗಳು ಕಾಣಿಸಿಕೊಂಡಿದೆ. ಅದರಂತೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ರಾಜಸ್ಥಾನ್ ರಾಯಲ್ಸ್ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.677.

7 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.206 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.529.

ಸನ್ರೈಸರ್ಸ್ ಹೈದರಾಬಾದ್ ತಂಡವು 7 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.914.

ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಆಡಿರುವ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 8 ಅಂಕಗಳೊಂದಿಗೆ +0.123 ನೆಟ್ ರನ್ ರೇಟ್ ಹೊಂದಿದೆ.

8 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 6ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.055.

ಪಂಜಾಬ್ ಕಿಂಗ್ಸ್ ತಂಡವು 9ನೇ ಸ್ಥಾನದಲ್ಲಿದ್ದು, ಆಡಿರುವ 8 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.292.

ಏಳು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.133.

8 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.477 ನೆಟ್ ರನ್ ರೇಟ್ನೊಂದಿಗೆ 6 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ಆರ್ಸಿಬಿ ತಂಡವು ಇದುವರೆಗೆ 8 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.046.



















