IPL 2024: SRH ವಿರುದ್ಧದ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್ ತಂಡದ 6 ಆಟಗಾರರು ಅಲಭ್ಯ..!

|

Updated on: May 16, 2024 | 1:46 PM

IPL 2024: ಪಂಜಾಬ್ ಕಿಂಗ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಎಸ್​ಆರ್​ಹೆಚ್​ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಸನ್​ರೈಸರ್ಸ್ ಹೈದರಾಬಾದ್ ತಂಡ ಪ್ಲೇಆಫ್ ಆಡಲಿರುವುದು ಖಚಿತವಾಗಲಿದೆ. ಆದರೆ ಅತ್ತ ಈ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್ ತಂಡದ 6 ಪ್ರಮುಖ ಅಲಭ್ಯರಾಗಲಿರುವುದು ಎಸ್​ಆರ್​ಹೆಚ್ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

1 / 7
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 69ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಮೇ 19 ರಂದು ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್ ತಂಡದ 6 ಆಟಗಾರರು ಅಲಭ್ಯರಾಗಲಿದ್ದಾರೆ. ಆ ಆಟಗಾರರು ಯಾರೆಲ್ಲಾ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

2 / 7
1- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಭುಜದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಅವರು ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಅಲ್ಲದೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯಕ್ಕೂ ಅವರು ಅಲಭ್ಯರಾಗಲಿದ್ದಾರೆ.

3 / 7
2- ಸ್ಯಾಮ್ ಕರನ್: ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕ ಸ್ಯಾಮ್ ಕರನ್ ತವರಿಗೆ ಮರಳಲಿದ್ದಾರೆ. ಮೇ 21 ರಿಂದ ಇಂಗ್ಲೆಂಡ್-ಪಾಕಿಸ್ತಾನ್ ನಡುವಣ ಟಿ20 ಸರಣಿ ಶುರುವಾಗಲಿದ್ದು, ಹೀಗಾಗಿ ಕರನ್ ತವರಿಗೆ ಹಿಂತಿರುಗಲಿದ್ದಾರೆ.

4 / 7
3- ಜಾನಿ ಬೈರ್​ಸ್ಟೋವ್: ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಕೂಡ ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ಸಹ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆಯಲಿದ್ದಾರೆ.

5 / 7
4- ಕಗಿಸೊ ರಬಾಡ: ಪಂಜಾಬ್ ಕಿಂಗ್ಸ್ ತಂಡದ ವೇಗದ ಬೌಲರ್​ ಕಗಿಸೊ ರಬಾಡ ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

6 / 7
5- ಲಿಯಾಮ್ ಲಿವಿಂಗ್​ಸ್ಟೋನ್: ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ಆಲ್​ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ಕೂಡ ತವರಿಗೆ ಮರಳಿದ್ದಾರೆ. ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಲಿವಿಂಗ್​ಸ್ಟೋನ್ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆಯಲಿದ್ದಾರೆ.

7 / 7
6- ಕ್ರಿಸ್ ವೋಕ್ಸ್​: ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ವೇಗಿ ಕ್ರಿಸ್ ವೋಕ್ಸ್ ಕೂಡ ಪಾಕಿಸ್ತಾನ್ ವಿರುದ್ಧ ಸರಣಿಗೆ ತವರಿಗೆ ಹಿಂತಿರುಗಲಿದ್ದಾರೆ. ಹೀಗಾಗಿ ಅವರು ಕೂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

Published On - 7:21 am, Thu, 16 May 24