IPL 2024: 16 ಅಂಕಗಳಿಸಿಯೂ ಪ್ಲೇಆಫ್ ಪ್ರವೇಶಿಸದ ರಾಜಸ್ಥಾನ್ ರಾಯಲ್ಸ್..!

| Updated By: ಝಾಹಿರ್ ಯೂಸುಫ್

Updated on: Apr 29, 2024 | 11:10 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಈವರೆಗೆ 9 ಪಂದ್ಯಗಳನ್ನಾಡಿದೆ. ಈ ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಸೋತಿದ್ದನ್ನು ಬಿಟ್ಟರೆ, ಉಳಿದ ಎಲ್ಲಾ 8 ಪಂದ್ಯಗಳಲ್ಲೂ ರಾಜಸ್ಥಾನ್ ರಾಯಲ್ಸ್ ತಂಡ ಜಯಭೇರಿ ಬಾರಿಸಿದೆ. ಈ ಎಂಟು ಗೆಲುವುಗಳ ಹೊರತಾಗಿಯೂ ಆರ್​ಆರ್ ತಂಡ ಪ್ಲೇಆಫ್​ಗೆ ಪ್ರವೇಶಿಸಿಲ್ಲ ಎಂಬುದು ವಿಶೇಷ.

1 / 5
ಈ ಬಾರಿಯ ಐಪಿಎಲ್​ನಲ್ಲಿ (IPL 2024) ಆಡಿರುವ 9 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದಾಗ್ಯೂ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್​ ಪ್ರವೇಶವನ್ನು ಖಚಿತಪಡಿಸಿಕೊಂಡಿಲ್ಲ ಎಂಬುದು ವಿಶೇಷ.

2 / 5
ಅಂದರೆ ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಆಫ್​ಗೆ ನೇರ ಅರ್ಹತೆ ಪಡೆಯಲು ಇನ್ನೆರಡು ಪಂದ್ಯಗಳನ್ನು ಗೆಲ್ಲಬೇಕಿದೆ. ಆರ್​ಸಿಬಿ ತಂಡವನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳಿಗೂ 16 ಅಂಕಗಳನ್ನು ಗಳಿಸುವ ಅವಕಾಶವಿದೆ. ಹೀಗಾಗಿ ಪ್ರಸ್ತುತ 16 ಅಂಕಗಳನ್ನು ಹೊಂದಿರುವ ಆರ್​ಆರ್ ತಂಡವು ಮುಂದಿನ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಪ್ರವೇಶಿಸುವನ್ನು ಬಹುತೇಕ ಖಚಿತಪಡಿಸಿಕೊಳ್ಳಬಹುದು.

3 / 5
ಹಾಗೆಯೇ ಮುಂದಿನ 5 ಪಂದ್ಯಗಳಲ್ಲಿ 2 ಮ್ಯಾಚ್​ಗಳನ್ನು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಪ್ಲೇಆಫ್​ಗೆ ಅಧಿಕೃತವಾಗಿ ಅರ್ಹತೆ ಪಡೆಯಲಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಆರ್​ ಪ್ಲೇಆಫ್​ಗೆ ಪ್ರವೇಶಿಸುವ ವಿಶ್ವಾಸದಲ್ಲಿದೆ.

4 / 5
ಇನ್ನು 8 ಪಂದ್ಯಗಳಲ್ಲಿ 10 ಅಂಕ ಪಡೆದಿರುವ ಕೆಕೆಆರ್ ಮುಂದಿನ 6 ಪಂದ್ಯಗಳಲ್ಲಿ 5 ಜಯ ಸಾಧಿಸಿದರೆ ಒಟ್ಟು 20 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಿಬಹುದು. ಹಾಗೆಯೇ 10 ಅಂಕಗಳನ್ನು ಹೊಂದಿರುವ ಸಿಎಸ್​ಕೆ ತಂಡ ಮುಂದಿನ 5 ಪಂದ್ಯಗಳಲ್ಲೂ ಜಯ ಸಾಧಿಸಿ 20 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಳ್ಳಬಹುದು. ಅದೇ ರೀತಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೂ ಮುಂದಿನ 5 ಪಂದ್ಯಗಳಲ್ಲಿ ಜಯ ಸಾಧಿಸಿ 20 ಅಂಕಗಳನ್ನು ಗಳಿಸಲು ಉತ್ತಮ ಅವಕಾಶವಿದೆ.

5 / 5
ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಹೆಚ್ಚಿನ ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಲು ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿ ನಡುವೆ ಕೆಲ ತಂಡಗಳ ಲೆಕ್ಕಾಚಾರಗಳು ತಲೆಕೆಳಗಾದರೆ ಮಾತ್ರ ಉಳಿದ ಟೀಮ್​ಗಳು ಪ್ಲೇಆಫ್ ರೇಸ್​ನಲ್ಲಿ ಮುಂಚೂಣಿಗೆ ಬರಲಿದೆ.

Published On - 11:07 am, Mon, 29 April 24