IPL 2024: ನೇರವಾಗಿ ಪ್ಲೇಆಫ್ ಪ್ರವೇಶಿಸಿದ ರಾಜಸ್ಥಾನ್ ರಾಯಲ್ಸ್
IPL 2024: ಐಪಿಎಲ್ 2024ರ 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್ಗೆ ಪ್ರವೇಶಿಸಿದೆ. ಅಂದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸೋಲಿನಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಆಫ್ ಪ್ರವೇಶ ಖಚಿತವಾಗಿದೆ.
1 / 5
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 64ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (DC) ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ (RR) ತಂಡ ಪ್ಲೇಆಫ್ ಪ್ರವೇಶಿಸಿರುವುದು ವಿಶೇಷ.
2 / 5
ಅಂದರೆ ಅಂಕ ಪಟ್ಟಿಯಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಸೋತರೂ ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಆರ್ಆರ್ ತಂಡವು ಈಗಾಗಲೇ 16 ಅಂಕಗಳನ್ನು ಕಲೆಹಾಕಿದೆ. ಇನ್ನು ಸಿಎಸ್ಕೆ ಮತ್ತು ಎಸ್ಆರ್ಹೆಚ್ ತಂಡಗಳಿಗೆ ಮಾತ್ರ 16 ಅಂಕಗಳನ್ನು ಸಂಪಾದಿಸಲು ಅವಕಾಶವಿದೆ.
3 / 5
ಸನ್ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 16 ಅಂಕಗಳನ್ನು ಕಲೆಹಾಕಿದರೂ ರಾಜಸ್ಥಾನ್ ರಾಯಲ್ಸ್ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿಯೇ 2 ಪಂದ್ಯಗಳಿದ್ದರೂ ಅಂಕ ಪಟ್ಟಿಯಲ್ಲಿರುವ ದ್ವಿತೀಯ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು ನೇರವಾಗಿ ಪ್ಲೇಆಫ್ಗೆ ಅರ್ಹತೆ ಪಡೆದುಕೊಂಡಿದೆ.
4 / 5
ಸದ್ಯ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇಆಫ್ಗೆ ಅರ್ಹತೆಗಿಟ್ಟಿಸಿಕೊಂಡಿದ್ದು, ಉಳಿದೆರಡು ಸ್ಥಾನಗಳಿಗಾಗಿ ಚೆನ್ನೈ ಸೂಪರ್ ಕಿಂಗ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನೇರ ಪೈಪೋಟಿ ಇದೆ.
5 / 5
ಒಂದು ವೇಳೆ ಆರ್ಸಿಬಿ ತಂಡವು ಸಿಎಸ್ಕೆ ವಿರುದ್ಧ ಕೊನೆಯ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ, ಅಂಕ ಪಟ್ಟಿಯಲ್ಲಿ 3ನೇ ಅಥವಾ 4ನೇ ಸ್ಥಾನ ಅಲಂಕರಿಸುವ ಮೂಲಕ ಪ್ಲೇಆಫ್ಗೆ ಪ್ರವೇಶಿಸಬಹುದು. ಹೀಗಾಗಿ ಸಿಎಸ್ಕೆ-ಆರ್ಸಿಬಿ ನಡುವಣ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
Published On - 2:58 pm, Wed, 15 May 24