AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಧೋನಿ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರವೀಂದ್ರ ಜಡೇಜಾ

IPL 2024 PBKS vs CSK: ಧರ್ಮಶಾಲಾದ ಹೆಚ್​​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 53ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 139 ರನ್​ಗಳಿಗೆ ಆಲೌಟ್ ಆಗಿ 28 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

TV9 Web
| Edited By: |

Updated on: May 06, 2024 | 9:57 AM

Share
ಐಪಿಎಲ್​ನ​ (IPL 2024) 54ನೇ ಪಂದ್ಯದ ಮೂಲಕ ರವೀಂದ್ರ ಜಡೇಜಾ (Ravindra Jadeja) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ (MS Dhoni) ವಿಶೇಷ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ ತಂಡವು 28 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದ ಗೆಲುವಿನ ರೂವಾರಿ ರವೀಂದ್ರ ಜಡೇಜಾ. ಬ್ಯಾಟಿಂಗ್​ನಲ್ಲಿ 43 ರನ್​ಗಳ ಕೊಡುಗೆ ನೀಡಿದ್ದ ಜಡೇಜಾ, ಬೌಲಿಂಗ್​ನಲ್ಲಿ 4 ಓವರ್​ಗಳಲ್ಲಿ ಕೇವಲ 20 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು.

2 / 5
ಈ ಅದ್ಭುತ ಆಲ್​ರೌಂಡರ್ ಪ್ರದರ್ಶನದ ಫಲವಾಗಿ ರವೀಂದ್ರ ಜಡೇಜಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು. ಇದರೊಂದಿಗೆ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ಜಡೇಜಾ ಪಾಲಾಯಿತು. ಅಂದರೆ ಸಿಎಸ್​ಕೆ ಪರ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರನಾಗಿ ರವೀಂದ್ರ ಜಡೇಜಾ ಹೊರಹೊಮ್ಮಿದ್ದಾರೆ.

3 / 5
ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಸಿಎಸ್​ಕೆ ಪರ 255 ಪಂದ್ಯಗಳನ್ನಾಡಿರುವ ಧೋನಿ ಒಟ್ಟು 15 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಇದೀಗ ಈ ದಾಖಲೆಯನ್ನು ಜಡೇಜಾ ಮುರಿದಿದ್ದಾರೆ.

4 / 5
ರವೀಂದ್ರ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ಪರ 183 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 16 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಸಿಎಸ್​ಕೆ ಪರ ಅತೀ ಹೆಚ್ಚು ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ ಆಟಗಾರ ಎಂಬ ಹೆಗ್ಗಳಿಕೆಗೆ ರವೀಂದ್ರ ಜಡೇಜಾ ಪಾತ್ರರಾಗಿದ್ದಾರೆ.

5 / 5
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್

ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ

ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ

ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?

ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ

ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು

‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ

ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್