- Kannada News Photo gallery Cricket photos IPL 2024: RCB becomes second team to complete 1500 IPL sixes
IPL 2024: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಿದ RCB
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಆರ್ಸಿಬಿ ನೀಡಿದ 183 ರನ್ಗಳ ಗುರಿಯನ್ನು ಕೆಕೆಆರ್ ತಂಡ 16.5 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಗೆಲುವು ದಾಖಲಿಸಿದೆ. ಇದರೊಂದಿಗೆ IPL 2024 ರಲ್ಲಿ ಆಡಿದ ಎರಡೂ ಪಂದ್ಯಗಳಲ್ಲೂ KKR ಗೆಲುವು ದಾಖಲಿಸಿದಂತಾಗಿದೆ.
Updated on: Mar 30, 2024 | 6:23 AM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 10ನೇ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಸಿಕ್ಸ್ಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ.

ಈ ಪಂದ್ಯದಲ್ಲಿ ಟಾಸ್ ಸೋತು, ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ, ಕ್ಯಾಮರೋನ್ ಗ್ರೀನ್, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ದಿನೇಶ್ ಕಾರ್ತಿಕ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಆರ್ಸಿಬಿ ಬ್ಯಾಟರ್ಗಳಿಂದ ಒಟ್ಟು 11 ಸಿಕ್ಸ್ಗಳು ಮೂಡಿಬಂದಿದ್ದವು.

ಈ 11 ಸಿಕ್ಸರ್ಗಳೊಂದಿಗೆ ಐಪಿಎಲ್ ಇತಿಹಾಸದಲ್ಲಿ 1500 ಸಿಕ್ಸ್ಗಳನ್ನು ಬಾರಿಸಿದ 2ನೇ ತಂಡ ಎಂಬ ಹೆಗ್ಗಳಿಕೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮ್ ಪಾತ್ರರಾಗಿದೆ. ಐಪಿಎಲ್ನಲ್ಲಿ ಇದುವರೆಗೆ 244 ಪಂದ್ಯಗಳನ್ನಾಡಿರುವ ಆರ್ಸಿಬಿ 1500+ ಸಿಕ್ಸ್ ಸಿಡಿಸಿ ಈ ಸಾಧನೆ ಮಾಡಿದೆ.

ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಈ ವಿಶೇಷ ದಾಖಲೆ ಬರೆದಿತ್ತು. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 249 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ ಇದುವರೆಗೆ 1575 ಸಿಕ್ಸ್ ಬಾರಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಇದೀಗ 1500 ಸಿಕ್ಸ್ಗಳನ್ನು ಪೂರೈಸುವ ಮೂಲಕ ಆರ್ಸಿಬಿ ತಂಡವು ಈ ಸಾಧನೆ ಮಾಡಿದ 2ನೇ ತಂಡ ಎನಿಸಿಕೊಂಡಿದೆ. ಇನ್ನು ಇದೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಕೂಡ ಆರ್ಸಿಬಿ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 232 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ ಇದುವರೆಗೆ 241 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಆರ್ಸಿಬಿ ಪರ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ವಿರಾಟ್ ಕೊಹ್ಲಿಯ ನಂತರದ ಸ್ಥಾನಗಳಲ್ಲಿ ಕ್ರಿಸ್ ಗೇಲ್ ಹಾಗೂ ಎಬಿ ಡಿವಿಲಿಯರ್ಸ್ ಇದ್ದು, ಆರ್ಸಿಬಿ ಪರ ಕೇವಲ 84 ಇನಿಂಗ್ಸ್ ಆಡಿರುವ ಗೇಲ್ ಒಟ್ಟು 239 ಸಿಕ್ಸ್ಗಳನ್ನು ಬಾರಿಸಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಹಾಗೆಯೇ ಎಬಿಡಿ 144 ಇನಿಂಗ್ಸ್ಗಳಿಂದ 238 ಸಿಕ್ಸ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ.
