IPL 2024: ಈ ಬೌಲರ್​ಗಳಿಂದ RCB ಕಪ್ ಗೆಲ್ಲಲು ಸಾಧ್ಯವಿಲ್ಲ: ಮೈಕೆಲ್ ವಾನ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಆರ್​ಸಿಬಿ ಇದುವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಮ್ಯಾಚ್​ನಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ ತನ್ನ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಇನ್ನು ಮೂರನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಗ್ಗರಿಸಿದೆ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಸಜ್ಜಾಗುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 01, 2024 | 11:23 AM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಆರಂಭದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಲೆಕ್ಕಾಚಾರಗಳು ತಲೆಕೆಳಗಾಗುವಂತೆ ಕಾಣುತ್ತಿದೆ. ಇದಕ್ಕೆ ಮುಖ್ಯ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹೀನಾಯವಾಗಿ ಸೋತಿರುವುದು. ಅಂದರೆ ತವರು ಮೈದಾನದಲ್ಲೇ ಆರ್​ಸಿಬಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ.

1 / 7
ಇದೇ ಕಾರಣದಿಂದಾಗಿ ಇದೀಗ ಈ ಬೌಲರ್​ಗಳನ್ನು ಇಟ್ಟುಕೊಂಡು ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾನ್.

2 / 7
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪವರ್​ಪ್ಲೇನಲ್ಲೇ 85 ರನ್​ಗಳನ್ನು ಬಿಟ್ಟುಕೊಟ್ಟಿದ್ದರು. ಅಲ್ಲದೆ 183 ರನ್​ಗಳ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೇವಲ 16.5 ಓವರ್​ಗಳಲ್ಲಿ ಚೇಸ್ ಮಾಡಿದ್ದರು. ಇಂತಹದೊಂದು ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಬೆನ್ನಲ್ಲೇ ಮೈಕೆಲ್ ವಾನ್, ಈ ಸಲ ಕೂಡ ಆರ್​ಸಿಬಿ ಕಪ್ ಗೆಲ್ಲುವುದು ಅಸಾಧ್ಯ ಎಂದಿದ್ದಾರೆ.

3 / 7
ಏಕೆಂದರೆ ಆರ್​ಸಿಬಿ ತಂಡವು ಉತ್ತಮ ಬೌಲರ್​ಗಳನ್ನು ಹೊಂದಿಲ್ಲ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ವಿಜಯಕುಮಾರ್ ವೈಶಾಕ್ ಅವರನ್ನು ಹೊರತುಪಡಿಸಿದರೆ, ಉಳಿದೆಲ್ಲರೂ ದುಬಾರಿಯಾಗಿದ್ದರು. ಇಂತಹ ಬೌಲಿಂಗ್ ಲೈನಪ್​ನೊಂದಿಗೆ ಕಣಕ್ಕಿಳಿದರೆ ಆರ್​ಸಿಬಿ ಗೆಲ್ಲುವುದೇ ಕಷ್ಟ, ಅಂತಹದ್ರಲ್ಲಿ ಕಪ್ ಗೆಲ್ಲುವುದನ್ನು ನಿರೀಕ್ಷಿಸಬಾರದು ಎಂದು ವಾನ್ ಹೇಳಿದ್ದಾರೆ.

4 / 7
ಒಂದಾರ್ಥದಲ್ಲಿ ಮೈಕೆಲ್ ವಾನ್ ಹೇಳಿರುವುದು ಕೂಡ ನಿಜ ಎಂದೇ ಹೇಳಬಹುದು. ಏಕೆಂದರೆ ಮೊದಲ ಪಂದ್ಯದಲ್ಲಿ ಆರ್​ಸಿಬಿ ನೀಡಿದ 174 ರನ್​ಗಳನ್ನು ಸಿಎಸ್​ಕೆ ತಂಡ 18.4 ಓವರ್​ಗಳಲ್ಲಿ ಚೇಸ್ ಮಾಡಿತ್ತು. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಆರ್​ಸಿಬಿ ಬೌಲರ್​ಗಳು 176 ರನ್​ ಬಿಟ್ಟುಕೊಟ್ಟಿದ್ದರು.

5 / 7
ಇದೀಗ ಕೆಕೆಆರ್ ಕೂಡ ಆರ್​ಸಿಬಿ ಬೌಲರ್​ಗಳ ವಿರುದ್ಧ ಪರಾಕ್ರಮ ಮರೆದಿದ್ದಾರೆ. ಹೀಗಾಗಿಯೇ ಮೈಕೆಲ್ ವಾನ್, ಆರ್​ಸಿಬಿ ತಂಡವು ಇಂತಹ ಬೌಲಿಂಗ್​ನಿಂದ ಕಪ್ ಗೆಲ್ಲಲು ಸಾಧ್ಯವಿಲ್ಲ ಎಂದು ನೇರವಾಗಿ ಹೇಳಿದ್ದಾರೆ.

6 / 7
RCB ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ವೇಳೆ ಆರ್​ಸಿಬಿ ತನ್ನ ಬೌಲಿಂಗ್ ಲೈನಪ್ ಬದಲಿಸಲಿದೆಯಾ ಕಾದು ನೋಡಬೇಕಿದೆ.

7 / 7
Follow us
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ

ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್