ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡದ ಪರ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 41 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 102 ರನ್ ಬಾರಿಸಿದರು. ಇನ್ನು ಹೆನ್ರಿಕ್ ಕ್ಲಾಸೆನ್ (67) ಅರ್ಧಶತಕ ಸಿಡಿಸಿದರೆ, ಐಡೆನ್ ಮಾರ್ಕ್ರಾಮ್ 32, ಅಬ್ದುಲ್ ಸಮದ್ 37 ರನ್ ಸಿಡಿಸಿದರು. ಈ ಮೂಲಕ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ದಾಖಲೆಯ 287 ರನ್ ಕಲೆಹಾಕಿತು.