IPL 2024: ರಣರೋಚಕ ಹೋರಾಟದಲ್ಲಿ ಸೋತರೂ ವಿಶ್ವ ದಾಖಲೆ ಬರೆದ RCB

| Updated By: ಝಾಹಿರ್ ಯೂಸುಫ್

Updated on: Apr 16, 2024 | 3:30 PM

IPL 2024 RCB vs SRH: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 30ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಸನ್​ರೈಸರ್ಸ್​ ಹೈದರಾಬಾದ್ ತಂಡ ನೀಡಿದ 288 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ 262 ರನ್​ಗಳಿಸುವ ಮೂಲಕ 25 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಈ ಸೋಲಿನ ಹೊರತಾಗಿಯೂ ಆರ್​ಸಿಬಿ ವಿಶೇಷ ದಾಖಲೆ ಬರೆದಿದೆ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 30ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಯಿತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು.

2 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡದ ಪರ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 41 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 102 ರನ್ ಬಾರಿಸಿದರು. ಇನ್ನು ಹೆನ್ರಿಕ್ ಕ್ಲಾಸೆನ್ (67) ಅರ್ಧಶತಕ ಸಿಡಿಸಿದರೆ, ಐಡೆನ್ ಮಾರ್ಕ್ರಾಮ್ 32, ಅಬ್ದುಲ್ ಸಮದ್ 37 ರನ್ ಸಿಡಿಸಿದರು. ಈ ಮೂಲಕ ಸನ್​ರೈಸರ್ಸ್​ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ದಾಖಲೆಯ 287 ರನ್ ಕಲೆಹಾಕಿತು.

3 / 6
288 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ದಿಟ್ಟ ಹೋರಾಟವನ್ನೇ ಪ್ರದರ್ಶಿಸಿತು. ಆರಂಭಿಕರಾದ ವಿರಾಟ್ ಕೊಹ್ಲಿ 42 ರನ್ ಬಾರಿಸಿದರೆ, ಫಾಫ್ ಡುಪ್ಲೆಸಿಸ್ 62 ರನ್ ಸಿಡಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ದಿನೇಶ್ ಕಾರ್ತಿಕ್ 35 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 83 ರನ್ ಚಚ್ಚಿದರು. ಈ ಭರ್ಜರಿ ಬ್ಯಾಟಿಂಗ್​ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 262 ರನ್​ ಕಲೆಹಾಕಿತು. ಈ ಮೂಲಕ 25 ರನ್​ಗಳ ಅಂತರದಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

4 / 6
ವಿಶೇಷ ಎಂದರೆ ಈ ಸೋಲಿನ ಹೊರತಾಗಿಯೂ ಈ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಚೇಸಿಂಗ್​ನಲ್ಲಿ 262 ರನ್​ಗಳನ್ನು ಬಾರಿಸುವ ಮೂಲಕ ಎಂಬುದು ವಿಶೇಷ.

5 / 6
ಅಂದರೆ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್ ವೇಳೆ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಇದೀಗ ಆರ್​ಸಿಬಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿತ್ತು. 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಸೌತ್ ಆಫ್ರಿಕಾ 4 ವಿಕೆಟ್ ಕಳೆದುಕೊಂಡು 259 ರನ್​ಗಳನ್ನು ಚೇಸ್ ಮಾಡಿ ಭರ್ಜರಿ ಜಯ ಸಾಧಿಸಿತ್ತು.

6 / 6
ಇದೀಗ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 262 ರನ್​ಗಳನ್ನು ಬಾರಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೌತ್ ಆಫ್ರಿಕಾ ತಂಡದ ದಾಖಲೆ ಮುರಿದಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್ ವೇಳೆ ಅತೀ ಹೆಚ್ಚು ರನ್ ಬಾರಿಸಿದ ಹೊಸ ವಿಶ್ವ ದಾಖಲೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.