
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) ಪ್ಲೇಆಫ್ ರೇಸ್ ರೋಚಕಘಟ್ಟದತ್ತ ಸಾಗಿದೆ. 62 ಪಂದ್ಯಗಳ ಮುಕ್ತಾಯದ ವೇಳೆಗೆ ಪ್ಲೇಆಫ್ಗೆ ಅರ್ಹತೆ ಪಡೆದ ಏಕೈಕ ತಂಡ ಕೊಲ್ಕತ್ತಾ ನೈಟ್ ರೈಡರ್ಸ್. ಇನ್ನುಳಿದ ಮೂರು ಸ್ಥಾನಗಳಿಗಾಗಿ 7 ತಂಡಗಳ ನಡುವಣ ಪೈಪೋಟಿ ಇದೆ.

ಈ ಪೈಪೋಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಂಚೂಣಿಯಲ್ಲಿದೆ. ಏಕೆಂದರೆ ಮುಂದಿನ 2 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಒಂದು ಜಯ ಸಾಧಿಸಿದರೆ ಅಧಿಕೃತವಾಗಿ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ. ಹಾಗೆಯೇ ಎಸ್ಆರ್ಹೆಚ್ ತಂಡಕ್ಕೂ ಎರಡು ಮ್ಯಾಚ್ಗಳಲ್ಲಿದ್ದು, ಈ ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಪ್ಲೇಆಫ್ಗೆ ಎಂಟ್ರಿ ಕೊಡಬಹುದು.

ಇನ್ನು ಸಿಎಸ್ಕೆ ಹಾಗೂ ಆರ್ಸಿಬಿ ತಂಡಗಳಿಗೆ ಒಂದು ಮ್ಯಾಚ್ ಇದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್ ರೇಸ್ನಲ್ಲಿ ಉಳಿಯಲಿದೆ. ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು 12 ಅಂಕಗಳನ್ನು ಹೊಂದಿದೆ. ಹಾಗೆಯೇ ಗುಜರಾತ್ ಟೈಟಾನ್ಸ್ 10 ಅಂಕಗಳೊಂದಿಗೆ ಪ್ಲೇಆಫ್ ರೇಸ್ನಲ್ಲಿದೆ.

ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಸನ್ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಇನ್ನೂ 2 ಪಂದ್ಯಗಳಿರುವುದು. ಅಂದರೆ ಈ ಎರಡೂ ತಂಡಗಳು ಮುಂದಿನ ಮ್ಯಾಚ್ಗಳನ್ನು ಗೆದ್ದರೆ ಒಟ್ಟು 16 ಅಂಕಗಳನ್ನು ಹೊಂದಲಿದೆ.

ಅಂದರೆ ಇಲ್ಲಿ ಕೆಕೆಆರ್ (18 ಅಂಕಗಳು) ಬಳಿಕ ಆರ್ಆರ್ 18 ಅಂಕಗಳೊಂದಿಗೆ ಪ್ಲೇಆಫ್ಗೆ ಪ್ರವೇಶಿಸಿದರೆ, 3ನೇ ಮತ್ತು 4ನೇ ಸ್ಥಾನಗಳಲ್ಲಿ 16 ಅಂಕಗಳೊಂದಿಗೆ ಸನ್ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕಾಣಿಸಿಕೊಳ್ಳಬಹುದು.

ಅತ್ತ ಸನ್ರೈಸರ್ಸ್ ಹೈದರಾಬಾದ್ ತನ್ನ ಮುಂದಿನ ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳನ್ನು ಎದುರಿಸಲಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಲಿದೆ.

ಈ ಪಂದ್ಯಗಳಲ್ಲಿ SRH ಮತ್ತು LSG ತಂಡಗಳು ಜಯ ಸಾಧಿಸಿದರೆ ಆರ್ಸಿಬಿ ತಂಡವು ಪ್ಲೇಆಫ್ ರೇಸ್ನಿಂದ ಹೊರಬೀಳಲಿದೆ. ಹಾಗೆಯೇ ಸಿಎಸ್ಕೆ ತನ್ನ ಕೊನೆಯ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಗೆಲುವು ಸಾಧಿಸಿದರೂ ನೆಟ್ ರನ್ ರೇಟ್ ಸಹಾಯದಿಂದ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು.

ಹೀಗಾಗಿ SRH ಮತ್ತು LSG ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶ RCB ಮತ್ತು CSK ತಂಡಗಳಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಭರ್ಜರಿ ಜಯ ಸಾಧಿಸಿದರೆ RCB ಮತ್ತು CSK ತಂಡಗಳು ಪ್ಲೇಆಫ್ ರೇಸ್ನಿಂದ ಹೊರಬೀಳುವುದು ಖಚಿತ.