IPL 2024: RCB ಗೆ ವಿಂಡೀಸ್ ವೇಗಿ?

| Updated By: ಝಾಹಿರ್ ಯೂಸುಫ್

Updated on: Jan 31, 2024 | 8:23 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್ 17 ರಿಂದ RCB ತಂಡದ ಸ್ಟಾರ್ ಆಲ್​ರೌಂಡರ್ ಹೊರಗುಳಿಯುವ ಸಾಧ್ಯತೆಯಿದೆ. ಅವರ ಬದಲಿಗೆ ವೆಸ್ಟ್ ಇಂಡೀಸ್ ತಂಡದ ಯುವ ವೇಗಿ ಶಮರ್ ಜೋಸೆಫ್ ಆಯ್ಕೆಯಾಗುವ ಸಾಧ್ಯತೆಯಿದೆ.

1 / 8
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-17 ಗಾಗಿ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಬಲಿಷ್ಠ ಪಡೆಯನ್ನು ರೂಪಿಸಿಕೊಂಡಿದೆ. ಹೀಗೆ 25 ಸದಸ್ಯರ ಬಳಗವನ್ನು ರಚಿಸಿಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಇಂಗ್ಲೆಂಡ್ ಆಟಗಾರ ಟಾಮ್ ಕರನ್ ಹೊರಗುಳಿಯುವ ಸಾಧ್ಯತೆಯಿದೆ.

2 / 8
ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ  ನಡೆದ ಬಿಗ್ ಬ್ಯಾಷ್ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಕಣಕ್ಕಿಳಿದಿದ್ದ ಟಾಮ್ ಕರನ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಅಲ್ಲದೆ ಅರ್ಧದಲ್ಲೇ ಟೂರ್ನಿಯಿಂದ ಹೊರಗುಳಿದಿದ್ದರು. ಇದೀಗ ಈ ಗಾಯದಿಂದ ಚೇತರಿಸಿಕೊಳ್ಳಲು ಅವರು ಒಂದಷ್ಟು ತಿಂಗಳುಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

3 / 8
ಇದೇ ಕಾರಣದಿಂದಾಗಿ ಟಾಮ್ ಕರನ್ ಐಪಿಎಲ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ. ಹೀಗಾಗಿಯೇ ಆರ್​ಸಿಬಿ ಇದೀಗ ಬದಲಿ ಆಟಗಾರನ ಮೇಲೆ ಕಣ್ಣಿಟ್ಟಿದೆ. ಈ ಆಟಗಾರರಲ್ಲಿ ಮುಂಚೂಣಿಯಲ್ಲಿರುವ ಹೆಸರು ಶಮರ್ ಜೋಸೆಫ್.

4 / 8
ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕೇವಲ 68 ರನ್​ಗಳಿಗೆ 7 ವಿಕೆಟ್ ಕಬಳಿಸುವ ಮೂಲಕ ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಇದೇ ಕಾರಣದಿಂದಾಗಿ ಇದೀಗ ಟಾಮ್ ಕರನ್ ಅವರ ಬದಲಿಯಾಗಿ ಶಮರ್​ ಅವರನ್ನು ಕರೆತರಲು ಆರ್​ಸಿಬಿ ಆಸಕ್ತಿ ಹೊಂದಿದೆ ಎಂದು ವರದಿಯಾಗಿದೆ.

5 / 8
ಬೌನ್ಸ್ ಹಾಗೂ ಯಾರ್ಕರ್ ಎಸೆತಗಳಿಂದ ಆಸ್ಟ್ರೇಲಿಯನ್ನರನ್ನು ಕಂಗೆಡಿಸಿದ್ದ ಶಮರ್ ಜೋಸೆಫ್ ಕೇವಲ 2 ಟೆಸ್ಟ್ ಪಂದ್ಯಗಳಿಂದ 13 ವಿಕೆಟ್ ಕಬಳಿಸಿದ್ದಾರೆ. ಈ ಅದ್ಭುತ ಪ್ರದರ್ಶನದಿಂದಾಗಿ ಇದೀಗ ವಿಂಡೀಸ್ ವೇಗಿಗೆ ಐಪಿಎಲ್​ನಲ್ಲಿ ಅದೃಷ್ಟ ಖುಲಾಯಿಸುವ ಸಾಧ್ಯತೆಯಿದೆ.

6 / 8
ಈ ಬಗ್ಗೆ ಟ್ವೀಟ್ ಮಾಡಿರುವ ಆರ್​ಸಿಬಿ ತಂಡದ ಮಾಜಿ ಕಾರ್ಯಕ್ಷಮತೆ ವಿಶ್ಲೇಷಕ ಪ್ರಸನ್ನ ಅಗೋರಂ, ಶಮರ್ ಜೋಸೆಫ್ ಅವರಿಗೆ ಐಪಿಎಲ್‌ನಲ್ಲಿ ಅವಕಾಶ ಸಿಕ್ಕರೆ, ಅವರು ಬೋಲ್ಡ್​ ಆಗಿ (PLAY BOLD) ಆಡಲಿದ್ದಾರೆ ಖಾತ್ರಿಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇಲ್ಲಿ PLAY BOLD (ಆರ್​ಸಿಬಿ ಘೋಷವಾಕ್ಯ) ಎಂದು ಪ್ರಸ್ತಾಪಿಸುವ ಮೂಲಕ ನಾನೇನು ಹೇಳಿದ್ದೇನೆ ಎಂಬುದು ನಿಮಗೆ ಗೊತ್ತಾಗಿರುತ್ತೆ ಎಂಬ ಸುಳಿವು ನೀಡಿದ್ದಾರೆ.

7 / 8
ಪ್ರಸನ್ನ ಅಗೋರಂ ಅವರ ಈ ಪ್ಲೇ ಬೋಲ್ಡ್​ ಟ್ವೀಟ್ ಬೆನ್ನಲ್ಲೇ ಇದೀಗ ಟಾಮ್ ಕರನ್ ಬದಲಿಯಾಗಿ ಶಮರ್ ಜೋಸೆಫ್ ಆರ್​ಸಿಬಿಗೆ ಬರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಕರನ್ ಹೊರಗುಳಿದರೆ ಆರ್​ಸಿಬಿಗೆ ವಿಂಡೀಸ್ ವೇಗಿ ಎಂಟ್ರಿ ಕೊಡುವುದು ಬಹುತೇಕ ಖಚಿತ ಎಂದೇ ಹೇಳಬಹುದು.

8 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.