Chris Gayle: RCB ಪರ ಮತ್ತೆ ಕಣಕ್ಕಿಳಿಯಲು ನಾನು ರೆಡಿ..!
IPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯದ ವೇಳೆ ಕ್ರಿಸ್ ಗೇಲ್ ಕಾಣಿಸಿಕೊಂಡಿದ್ದರು. ಸ್ಟೇಡಿಯಂ ಗ್ಯಾಲರಿಯಲ್ಲಿ ಕೂತು ಆರ್‌ಸಿಬಿ ತಂಡವನ್ನು ಹುರಿದುಂಬಿಸಿದ ಗೇಲ್ ಆ ಬಳಿಕ ಡ್ರೆಸ್ಸಿಂಗ್ ರೂಮ್ಗೆ ತೆರಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರನ್ನು ಅಭಿನಂದಿಸಿದ್ದರು.