IPL 2024: RCBಗೆ ಮುಂದಿನ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸ
TV9 Web | Updated By: ಝಾಹಿರ್ ಯೂಸುಫ್
Updated on:
Apr 07, 2024 | 11:35 AM
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ನೀಡಿದ 184 ರನ್ಗಳ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 19.1 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 6 ವಿಕೆಟ್ಗಳ ಜಯ ಸಾಧಿಸಿತು.
1 / 7
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಅನ್ನು ಸೋಲಿನೊಂದಿಗೆ ಶುರು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ಹ್ಯಾಟ್ರಿಕ್ ಸೋಲಿನ ರುಚಿ ನೋಡಿದೆ. ಮೊದಲ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಸೋತಿದ್ದ ಆರ್ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಗೆಲುವಿನ ಖಾತೆ ತೆರೆದಿತ್ತು.
2 / 7
ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ವಿರುದ್ಧ ತವರಿನಲ್ಲಿ ಮುಗ್ಗರಿಸಿತ್ತು. ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೂಡ ಸೋಲುವ ಮೂಲಕ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲಿನೊಂದಿಗೆ ಆರ್ಸಿಬಿ ಅಂಕ ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದಿದೆ.
3 / 7
ಸದ್ಯ ಸತತ ಸೋಲಿನಿಂದ ಕಂಗೆಟ್ಟಿರುವ ಆರ್ಸಿಬಿ ಮುಂದಿನ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಅತ್ತ ಮುಂಬೈ ಕೂಡ ಆಡಿರುವ ಮೂರು ಪಂದ್ಯಗಳಲ್ಲೂ ಸೋಲುಂಡು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
4 / 7
ಹೀಗಾಗಿ ಏಪ್ರಿಲ್ 11 ರಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲಕ ಆರ್ಸಿಬಿ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ. ಅತ್ತ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿ ಮುಂಬೈ ಇಂಡಿಯನ್ಸ್.
5 / 7
ಹೀಗಾಗಿ ಸೋಲುಗಳಿಂದ ಕಂಗೆಟ್ಟಿರುವ ಉಭಯ ತಂಡಗಳ ಕದನದಲ್ಲಿ ಉತ್ತಮ ಪೈಪೋಟಿಯನ್ನು ನಿರೀಕ್ಷಿಸಬಹುದು. ಈ ಪೈಪೋಟಿಯಲ್ಲಿ ಗೆದ್ದು ಬೀಗುವವರು ಯಾರು ಎಂಬುದು ಏಪ್ರಿಲ್ 11 ರಂದು ಗೊತ್ತಾಗಲಿದೆ.
6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.
7 / 7
ಮುಂಬೈ ಇಂಡಿಯನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಲ್ಯೂಕ್ ವುಡ್, ರೊಮಾರಿಯೋ ಶೆಫರ್ಡ್, ಜೆರಾಲ್ಡ್ ಕೋಟ್ಜಿ, ಶ್ರೇಯಸ್ ಗೋಪಾಲ್, ನುವಾನ್ ತುಷಾರ, ನಮನ್ ಧೀರ್, ಅನ್ಶುಲ್ ಕಾಂಬೋಜ್, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.