AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB vs CSK ಮ್ಯಾಚ್ ಯಾವಾಗ? ಎಲ್ಲಿ ನಡೆಯಲಿದೆ ಮದಗಜಗಳ ಕಾಳಗ?

IPL 2024 RCB vs CSK: ಐಪಿಎಲ್​ನ ಸಾಂಪ್ರದಾಯಿಕ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಮದಗಜಗಳ ಕಾಳಗಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಚೆನ್ನೈನಲ್ಲಿ ನಡೆದಿದ್ದ ಕಳೆದ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸಿಎಸ್​ಕೆ ಜಯ ಸಾಧಿಸಿತ್ತು. ಇದೀಗ ಈ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ ಆರ್​ಸಿಬಿ.

ಝಾಹಿರ್ ಯೂಸುಫ್
|

Updated on:May 13, 2024 | 2:11 PM

IPL 2024: ಐಪಿಎಲ್​ ಸೀಸನ್ 17 ರ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಮೇ 18 ರಂದು ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೂ ನಿರ್ಣಾಯಕ.

1 / 7
ಏಕೆಂದರೆ ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಹಾಗೆಯೇ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ಮೂಲಕ ಪ್ಲೇಆಫ್ ಹಂತಕ್ಕೇರಲು ಅವಕಾಶ ಪಡೆಯಲಿದೆ. ಹೀಗಾಗಿ ಆರ್​ಸಿಬಿ-ಸಿಎಸ್​ಕೆ ತಂಡಗಳಿಗೆ ಮುಂದಿನ ಪಂದ್ಯ ನಿರ್ಣಾಯಕವಾಗಿದೆ.

2 / 7
ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವುದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್. ಏಕೆಂದರೆ ತವರಿನಲ್ಲಿ ಆಡಲಾದ ಕೊನೆಯ ಎರಡು ಪಂದ್ಯಗಳಲ್ಲೂ ಆರ್​ಸಿಬಿ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಸಿಎಸ್​ಕೆ ವಿರುದ್ಧದ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಮೋಘ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.

3 / 7
ಇನ್ನು RCB ಮತ್ತು CSK ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 10 ಮ್ಯಾಚ್​ಗಳಲ್ಲಿ ಮಾತ್ರ. ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 21 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

4 / 7
ಅಂದರೆ ಒಟ್ಟಾರೆ ಅಂಕಿ ಅಂಶಗಳ ಪ್ರಕಾರ ಆರ್​ಸಿಬಿ ವಿರುದ್ಧ ಸಿಎಸ್​ಕೆ ಮೇಲುಗೈ ಹೊಂದಿರುವುದು ಸ್ಪಷ್ಟ. ಇದಾಗ್ಯೂ ಕಳೆದ 5 ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿರುವ ಆರ್​ಸಿಬಿ ತಂಡವು ಹೊಸ ಹುಮ್ಮಸ್ಸಿನಲ್ಲಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

5 / 7
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಅಜಿಂಕ್ಯ ರಹಾನೆ, ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ರವೀಂದ್ರ ಜಡೇಜಾ, ಶಿವಂ ದುಬೆ, ಸಮೀರ್ ರಿಝ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹರ್, ತುಷಾರ್ ದೇಶಪಾಂಡೆ, ಶಾರ್ದೂಲ್ ಠಾಕೂರ್, ಶೇಕ್ ರಶೀದ್, ನಿಶಾಂತ್ ಸಿಂಧು, ಮಿಚೆಲ್ ಸ್ಯಾಂಟ್ನರ್, ಡೇರಿಲ್ ಮಿಚೆಲ್, ಅರವೆಲ್ಲಿ ಅವನೀಶ್, ಮಹೀಶ್ ತೀಕ್ಷಣ, ಆರ್ ಎಸ್ ಹಂಗರ್ಗೇಕರ್, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ, ಪ್ರಶಾಂತ್ ಸೋಲಂಕಿ, ಅಜಯ್ ಜಾದವ್ ಮಂಡಲ್, ರಿಚರ್ಡ್ ಗ್ಲೀಸನ್.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಣ್.

7 / 7

Published On - 2:10 pm, Mon, 13 May 24

Follow us