IPL 2024: RCB ಮುಂದಿದೆ ಮೂರು ಸವಾಲುಗಳು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಹೊಸ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 7ನೇ ಸ್ಥಾನಕ್ಕೇರಿದೆ. ಕಳೆದ ಬಾರಿ 10ನೇ ಸ್ಥಾನದಲ್ಲಿದ್ದ ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಮೂರು ಸ್ಥಾನ ಮೇಲೇರಿದೆ. ಈ ಮೂಲಕ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 05, 2024 | 2:25 PM

ಇಂಡಿಯನ್ ಪ್ರೀಮಿಯರ್ ಲೀಗ್​ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಒಟ್ಟು 11 ಪಂದ್ಯಗಳನ್ನಾಡಿದೆ. ಈ ಹನ್ನೊಂದು ಮ್ಯಾಚ್​ಗಳಲ್ಲಿ ಆರ್​ಸಿಬಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, 7 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ಒಟ್ಟು 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

1 / 7
ಇದಾಗ್ಯೂ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಅಂದರೆ 52 ಪಂದ್ಯಗಳ ಮುಕ್ತಾಯವಾದರೂ ಯಾವುದೇ ತಂಡ ಪ್ಲೇಆಫ್ ಅನ್ನು ಖಚಿತಪಡಿಸಿಕೊಂಡಿಲ್ಲ. ಒಂದು ವೇಳೆ ಅಂಕ ಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಪಡೆಯುವ ತಂಡಗಳು 16 ಅಂಕಗಳನ್ನು ಪಡೆದುಕೊಂಡರೆ ಮಾತ್ರ ಆರ್​ಸಿಬಿ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ.

2 / 7
ಅದುವರೆಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಅರ್ಹತೆ ಪಡೆಯಲು ಬೇಕಿರುವ ರಹದಾರಿಗಳನ್ನು ಕಂಡುಕೊಳ್ಳಲಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ ಮೂರು ಪಂದ್ಯಗಳು ತುಂಬಾ ಮಹತ್ವದ್ದು. ಏಕೆಂದರೆ ಈ ಮೂರು ಸವಾಲುಗಳನ್ನು ಆರ್​ಸಿಬಿ ಮೆಟ್ಟಿ ನಿಂತರೆ ಒಟ್ಟು 14 ಅಂಕಗಳನ್ನು ಪಡೆಯಲಿದೆ.

3 / 7
ಒಂದು ವೇಳೆ ಲೀಗ್ ಹಂತದ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡ 14 ಅಂಕಗಳನ್ನು ಮಾತ್ರ ಹೊಂದಿದ್ದರೆ, ಇತ್ತ ನೆಟ್ ರನ್ ರೇಟ್ ನೆರವಿನೊಂದಿಗೆ ಪ್ಲೇಆಫ್​ಗೇರುವ ಅವಕಾಶ ಆರ್​ಸಿಬಿ ತಂಡಕ್ಕೆ ಸಿಗಲಿದೆ. ಹೀಗಾಗಿ ಆರ್​ಸಿಬಿ ಮುಂದಿನ ಮೂರು ಪಂದ್ಯಗಳಲ್ಲಿ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಭರ್ಜರಿ ಜಯ ಸಾಧಿಸುವ ಇರಾದೆಯಲ್ಲಿದೆ. ಆರ್​ಸಿಬಿ ತಂಡದ ಮುಂದಿನ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

4 / 7
PBKS vs RCB: ಮೇ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

5 / 7
RCB vs DC: ಮೇ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

6 / 7
RCB vs CSK: ಮೇ 18 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದೊಂದಿಗೆ ಆರ್​ಸಿಬಿ ತಂಡದ ಲೀಗ್ ಮ್ಯಾಚ್​ಗಳು ಪೂರ್ಣಗೊಳ್ಳಲಿದೆ.

7 / 7
Follow us
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ

ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ

ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ

ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ

Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ

ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!

ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ