AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಆಟಗಾರನಿಗೆ ಗಂಭೀರ ಗಾಯ: ಐಪಿಎಲ್​ಗೆ ಡೌಟ್..!

Tom Curran: ಇಂಗ್ಲೆಂಡ್ ಪರ 30 ಟಿ20 ಪಂದ್ಯಗಳನ್ನಾಡಿರುವ ಟಾಮ್ ಕರನ್ 29 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿ 64 ರನ್​ ಕಲೆಹಾಕಿದ್ದಾರೆ. ಇನ್ನು ಐಪಿಎಲ್​ನಲ್ಲಿ ಕೆಕೆಆರ್​, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಟಾಮ್ ಕರನ್ 127 ರನ್ ಬಾರಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Jan 11, 2024 | 8:47 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ  ತಿಂಗಳುಗಳು ಮಾತ್ರ ಉಳಿದಿವೆ. ಅತ್ತ ಎಲ್ಲಾ ಫ್ರಾಂಚೈಸಿಗಳು 17ನೇ ಸೀಸನ್​ಗಾಗಿ ಸಿದ್ಧತೆಗಳನ್ನು ಆರಂಭಿಸಿದೆ. ಆದರೆ ಈ ಸಿದ್ಧತೆ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ.

1 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಟಾಮ್ ಕರನ್ (Tom Curran) ಗಾಯಗೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಕಾಣಿಸಿಕೊಂಡಿದ್ದ ಕರನ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ.

2 / 6
ಟಾಮ್ ಕರನ್ ಅವರ ಮೊಣಕಾಲಿಗೆ ಗಂಭೀರ ಗಾಯವಾಗಿದ್ದು, ಹೀಗಾಗಿ ಅರ್ಧದಲ್ಲೇ ಬಿಗ್ ಬ್ಯಾಷ್ ಲೀಗ್ ತೊರೆದಿದ್ದಾರೆ. ಅಷ್ಟೇ ಅಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ಅವರು ಇಂಗ್ಲೆಂಡ್​ಗೆ ಮರಳಿದ್ದಾರೆ ಎಂದು ಸಿಡ್ನಿ ಸಿಕ್ಸರ್ಸ್ ಫ್ರಾಂಚೈಸಿ ಮೂಲಗಳು ತಿಳಿಸಿವೆ.

3 / 6
ಈ ಬಾರಿಯ ಐಪಿಎಲ್ ಹರಾಜಿನಲ್ಲಿ 1.50 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಆಲ್​ರೌಂಡರ್ ಟಾಮ್ ಕರನ್ ಅವರನ್ನು ಆರ್​ಸಿಬಿ ಬೇಸ್ ​ಪ್ರೈಸ್​ಗೆ​ ಖರೀದಿಸಿತ್ತು. ಇದೀಗ ಗಂಭೀರವಾಗಿ ಗಾಯಗೊಂಡಿರುವ ಕರನ್ ಮಾರ್ಚ್ ಮೊದಲ ವಾರದಲ್ಲಿ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಐಪಿಎಲ್ ಆಡಲಿದ್ದಾರೆ ಎಂದು ತಿಳಿದು ಬಂದಿದೆ.

4 / 6
ಇಂಗ್ಲೆಂಡ್ ಪರ 30 ಟಿ20 ಪಂದ್ಯಗಳನ್ನಾಡಿರುವ ಟಾಮ್ ಕರನ್ 29 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ 13 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿ 64 ರನ್​ ಕಲೆಹಾಕಿದ್ದಾರೆ. ಇನ್ನು ಐಪಿಎಲ್​ನಲ್ಲಿ ಕೆಕೆಆರ್​, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಟಾಮ್ ಕರನ್ 127 ರನ್ ಬಾರಿಸಿದ್ದಾರೆ. ಈ ವೇಳೆ 13 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

6 / 6

Published On - 8:46 am, Thu, 11 January 24

Follow us
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್

ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್

ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು

ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು

ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ

ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ