IPL 2024: RCB ಆಟಗಾರನಿಗೆ ಗಂಭೀರ ಗಾಯ: ಐಪಿಎಲ್ಗೆ ಡೌಟ್..!
TV9 Web | Updated By: ಝಾಹಿರ್ ಯೂಸುಫ್
Updated on:
Jan 11, 2024 | 8:47 AM
Tom Curran: ಇಂಗ್ಲೆಂಡ್ ಪರ 30 ಟಿ20 ಪಂದ್ಯಗಳನ್ನಾಡಿರುವ ಟಾಮ್ ಕರನ್ 29 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ 13 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿ 64 ರನ್ ಕಲೆಹಾಕಿದ್ದಾರೆ. ಇನ್ನು ಐಪಿಎಲ್ನಲ್ಲಿ ಕೆಕೆಆರ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಟಾಮ್ ಕರನ್ 127 ರನ್ ಬಾರಿಸಿದ್ದಾರೆ.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ ತಿಂಗಳುಗಳು ಮಾತ್ರ ಉಳಿದಿವೆ. ಅತ್ತ ಎಲ್ಲಾ ಫ್ರಾಂಚೈಸಿಗಳು 17ನೇ ಸೀಸನ್ಗಾಗಿ ಸಿದ್ಧತೆಗಳನ್ನು ಆರಂಭಿಸಿದೆ. ಆದರೆ ಈ ಸಿದ್ಧತೆ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ.
2 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಟಾಮ್ ಕರನ್ (Tom Curran) ಗಾಯಗೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್ನಲ್ಲಿ ಕಾಣಿಸಿಕೊಂಡಿದ್ದ ಕರನ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ.
3 / 6
ಟಾಮ್ ಕರನ್ ಅವರ ಮೊಣಕಾಲಿಗೆ ಗಂಭೀರ ಗಾಯವಾಗಿದ್ದು, ಹೀಗಾಗಿ ಅರ್ಧದಲ್ಲೇ ಬಿಗ್ ಬ್ಯಾಷ್ ಲೀಗ್ ತೊರೆದಿದ್ದಾರೆ. ಅಷ್ಟೇ ಅಲ್ಲದೆ ಹೆಚ್ಚಿನ ಚಿಕಿತ್ಸೆಗಾಗಿ ಅವರು ಇಂಗ್ಲೆಂಡ್ಗೆ ಮರಳಿದ್ದಾರೆ ಎಂದು ಸಿಡ್ನಿ ಸಿಕ್ಸರ್ಸ್ ಫ್ರಾಂಚೈಸಿ ಮೂಲಗಳು ತಿಳಿಸಿವೆ.
4 / 6
ಈ ಬಾರಿಯ ಐಪಿಎಲ್ ಹರಾಜಿನಲ್ಲಿ 1.50 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಆಲ್ರೌಂಡರ್ ಟಾಮ್ ಕರನ್ ಅವರನ್ನು ಆರ್ಸಿಬಿ ಬೇಸ್ ಪ್ರೈಸ್ಗೆ ಖರೀದಿಸಿತ್ತು. ಇದೀಗ ಗಂಭೀರವಾಗಿ ಗಾಯಗೊಂಡಿರುವ ಕರನ್ ಮಾರ್ಚ್ ಮೊದಲ ವಾರದಲ್ಲಿ ಸಂಪೂರ್ಣ ಫಿಟ್ನೆಸ್ ಸಾಧಿಸಿದರೆ ಮಾತ್ರ ಐಪಿಎಲ್ ಆಡಲಿದ್ದಾರೆ ಎಂದು ತಿಳಿದು ಬಂದಿದೆ.
5 / 6
ಇಂಗ್ಲೆಂಡ್ ಪರ 30 ಟಿ20 ಪಂದ್ಯಗಳನ್ನಾಡಿರುವ ಟಾಮ್ ಕರನ್ 29 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ 13 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿ 64 ರನ್ ಕಲೆಹಾಕಿದ್ದಾರೆ. ಇನ್ನು ಐಪಿಎಲ್ನಲ್ಲಿ ಕೆಕೆಆರ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಟಾಮ್ ಕರನ್ 127 ರನ್ ಬಾರಿಸಿದ್ದಾರೆ. ಈ ವೇಳೆ 13 ವಿಕೆಟ್ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
6 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.
Published On - 8:46 am, Thu, 11 January 24