AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹೊಸ ಜೆರ್ಸಿಯಲ್ಲಿ ಮಿಂಚಿದ RCB ಆಟಗಾರರು: ಇಲ್ಲಿದೆ ಫೋಟೋಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ತಂಡಗಳು ಮುಖಾಮುಖಿಯಾದರೆ, 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿದೆ. ಹಾಗೆಯೇ ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ಮೂರನೇ ಪಂದ್ಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Mar 20, 2024 | 10:55 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇರಲು ಇನ್ನು ಕೇವಲ ಒಂದು ದಿನ ಮಾತ್ರ ಉಳಿದಿದೆ. ಶುಕ್ರವಾರದಿಂದ ಐಪಿಎಲ್ ಸೀಸನ್ 17 ಶುರುವಾಗಲಿದ್ದು, ಮೊದಲ ಪಂದ್ಯದಲ್ಲೇ ಆರ್​ಸಿಬಿ (RCB) ಕಣಕ್ಕಿಳಿಯಲಿರುವು ವಿಶೇಷ.

1 / 11
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮೂಲಕ ಆರ್​ಸಿಬಿ-ಸಿಎಸ್​ಕೆ ಐಪಿಎಲ್ ಅಭಿಯಾನ ಆರಂಭಿಸಲಿದೆ.

2 / 11
ಈ ಬಾರಿಯ ಐಪಿಎಲ್​ಗಾಗಿ ಆರ್​ಸಿಬಿ ತಂಡವು ತನ್ನ ಜೆರ್ಸಿ ಬಣ್ಣವನ್ನು ಬದಲಿಸಿಕೊಂಡಿದೆ. ಈ ಹಿಂದೆಯಿದ್ದ ಕಪ್ಪು-ಕೆಂಪು ಬಣ್ಣಗಳ ಬದಲಿಗೆ ಈ ಸಲ ಆರ್​ಸಿಬಿ ನೀಲಿ-ಕೆಂಪುಗಳ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

3 / 11
ಹೊಸ ಜೆರ್ಸಿಯ ಬಿಡುಗಡೆ ಬೆನ್ನಲ್ಲೇ ಇದೀಗ ಆರ್​ಸಿಬಿ ಆಟಗಾರರು ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ತಂಡದ ನೂತನ ಜೆರ್ಸಿಯಲ್ಲಿ ವೇಗದ ಬೌಲರ್​ ಮೊಹಮ್ಮದ್ ಸಿರಾಜ್ ವಿವಿಧ ರೀತಿಯಲ್ಲಿ ಪೋಸ್ ನೀಡಿದ್ದಾರೆ.

4 / 11
ಇನ್ನು ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಕೂಡ ಫೋಟೋಶೂಟ್​ನಲ್ಲಿ ಭಾಗವಹಿಸಿದ್ದು, ಅವರು ಸಹ ಗ್ಲೌಸ್​ನೊಂದಿಗೆ ವಿವಿಧ ಭಂಗಿಯಲ್ಲಿ ಪೋಸ್ ನೀಡಿ ಮಿಂಚಿದ್ದಾರೆ.

5 / 11
ಹಾಗೆಯೇ ಆರ್​ಸಿಬಿ ತಂಡಕ್ಕೆ ಹೊಸದಾಗಿ ಬಂದಿರುವ ಆಸ್ಟ್ರೇಲಿಯಾದ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಕೂಡ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

6 / 11
ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಏಕೈಕ ಪಂದ್ಯವಾಡಿದ್ದ ರೀಸ್ ಟೋಪ್ಲಿ ಈ ಬಾರಿ ಕೂಡ ರೆಡ್ ಜೆರ್ಸಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದರಂತೆ ಇದೀಗ ಆರ್​ಸಿಬಿ ತಂಡದ ಫೋಟೋಶೂಟ್​ನಲ್ಲಿ ಟೋಪ್ಲಿ ಮಿಂಚಿದ್ದಾರೆ.

7 / 11
ಹಾಗೆಯೇ ಆರ್​ಸಿಬಿ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿರುವ ಯುವ ದಾಂಡಿಗ ರಜತ್ ಪಾಟಿದಾರ್ ಈ ಬಾರಿ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಅಖಾಡಕ್ಕಿಳಿಲು ಸಜ್ಜಾಗಿ ನಿಂತಿದ್ದಾರೆ.

8 / 11
ಫಾಫ್ ಡುಪ್ಲೆಸಿಸ್ ನಾಯಕತ್ವದಲ್ಲಿ ಇದೀಗ ಆರ್​ಸಿಬಿ ತಂಡವು ಮೂರನೇ ಸೀಸನ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದು, ಈ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದೆ.

9 / 11
ಇನ್ನು ಆರ್​ಸಿಬಿ ಪರ ಬಿಗ್ ಶೋ ತೋರಿಸಲು ಗ್ಲೆನ್ ಮ್ಯಾಕ್ಸ್​ವೆಲ್ ಸಹ ಸಕಲ ಸಿದ್ಧತೆಯಲ್ಲಿದ್ದಾರೆ. ಅದಕ್ಕೂ ಮುನ್ನ ನಡೆದ ಫೋಟೋಶೂಟ್​ನಲ್ಲಿ ಬ್ಯಾಟ್​ನೊಂದಿಗೆ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

10 / 11
ವಿರಾಟ್ ಕೊಹ್ಲಿ ಈ ಬಾರಿ ಆರ್​ಸಿಬಿ ಧ್ವಜದೊಂದಿಗೆ ಪೋಸ್ ನೀಡಿರುವುದು ವಿಶೇಷ. ಅಂದರೆ ಕಳೆದ ಸೀಸನ್​ನಲ್ಲೂ ಕೊಹ್ಲಿ ಇದೇ ಮಾದರಿಯಲ್ಲಿ ಧ್ವಜ ಹಿಡಿದು ಪೋಸ್ ಕೊಟ್ಟಿದ್ದರು. ಇದೀಗ ಧ್ವಜವನ್ನು ಹೆಗಲೇರಿಸಿಕೊಂಡು ಕಿಂಗ್​ಡಮ್​​ನಲ್ಲಿ ನಾನೇ ಕಿಂಗ್ ಎಂಬಂತೆ ವಿರಾಟ್ ಕೊಹ್ಲಿ ಪೋಸ್ ನೀಡಿದ್ದಾರೆ.

11 / 11
Follow Us
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ

ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ

ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ

‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ

ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ

ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು

ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು

ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ

ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ