IPL 2024: RCBಗೆ ಪ್ಲೇಆಫ್​ ಪ್ರವೇಶಿಸಲು ಇನ್ನೂ ಇದೆ ಅವಕಾಶ..!

| Updated By: ಝಾಹಿರ್ ಯೂಸುಫ್

Updated on: Apr 22, 2024 | 8:02 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ, ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್​ಸಿಬಿ ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಸತತ 6 ಪಂದ್ಯಗಳಲ್ಲಿ ಸೋಲನುಭವಿಸಿದೆ.

1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಅಲ್ಲದೆ 7 ಸೋಲುಗಳೊಂದಿಗೆ ಇದೀಗ ಅಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.

2 / 6
ಇದಾಗ್ಯೂ ಆರ್​ಸಿಬಿ ತಂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ ಎಂಬುದು ವಿಶೇಷ. ಅಂದರೆ ಉಳಿದ 6 ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಫಾಫ್ ಪಡೆಗೆ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಸೃಷ್ಟಿಸಿಕೊಳ್ಳಬಹುದು. ಹೀಗಾಗಿ ಇನ್ನೊಂದಷ್ಟು ಪಂದ್ಯಗಳವರೆಗೆ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಜೀವಂತವಿರಲಿದೆ.

3 / 6
ಅಂದರೆ ಇಲ್ಲಿ ಯಾವುದೇ ತಂಡ ಪ್ಲೇಆಫ್ ಹಂತಕ್ಕೇರಿಲ್ಲ. ಐಪಿಎಲ್​ನಲ್ಲಿ 16 ಅಂಕಗಳನ್ನು ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸುವುದನ್ನು ಖಚಿತ ಪಡಿಸಲಿದೆ. ಇಲ್ಲಿ ರಾಜಸ್ಥಾನ್ ರಾಯಲ್ಸ್ 12 ಅಂಕಗಳನ್ನು ಪಡೆದಿದ್ದರೆ, ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ತಲಾ 8 ಅಂಕಗಳನ್ನು ಹೊಂದಿದೆ.

4 / 6
ಈ ಮೂರು ತಂಡಗಳು ಮುಂದಿನ ಪಂದ್ಯಗಳ ಮೂಲಕ 16 ಅಂಕಗಳನ್ನು ಸಂಪಾದಿಸಿ ಪ್ಲೇಆಫ್ ಹಂತಕ್ಕೇರುವ ಸಾಧ್ಯತೆ ಹೆಚ್ಚಿದೆ. ಇನ್ನು ನಾಲ್ಕನೇ ತಂಡ 16 ಅಂಕಗಳನ್ನು ಪಡೆಯುವರೆಗೆ ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

5 / 6
ಸಾಮಾನ್ಯವಾಗಿ ಟಾಪ್-3 ತಂಡಗಳು 16 ಅಂಕಗಳನ್ನು ಕಲೆಹಾಕಿದರೆ 4ನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವ ತಂಡವು ​14 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್​​ಗೆ ಪ್ರವೇಶಿಸುವ ಸಾಧ್ಯತೆ ಹೆಚ್ಚು. ಇತ್ತ ಆರ್​ಸಿಬಿ ತಂಡವು ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದರೆ ಒಟ್ಟು 14 ಅಂಕಗಳನ್ನು ಸಂಪಾದಿಸಬಹುದು.

6 / 6
ಈ ಮೂಲಕ ಲೀಗ್ ಹಂತದ ಮುಕ್ತಾಯದ ವೇಳೆಗೆ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ನಾಲ್ಕನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಎದುರು ನೋಡಬಹುದು. ಅದರಂತೆ ಅಗ್ರ ನಾಲ್ಕು ತಂಡಗಳು 16 ಅಂಕಗಳನ್ನು ಗಳಿಸುವವರೆಗೆ ಆರ್​ಸಿಬಿ ತಂಡದ ಪ್ಲೇಆಫ್ ಆಸೆ ಜೀವಂತವಿರಲಿದೆ. ಹೀಗಾಗಿ ಮುಂಬರುವ ಪಂದ್ಯಗಳ ಮೂಲಕ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದರೂ ಅಚ್ಚರಿಪಡಬೇಕಿಲ್ಲ.