AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಪ್ಲೇಆಫ್ ಪ್ರವೇಶಿಸಲು ಯಾವೆಲ್ಲಾ ತಂಡ ಸೋಲಬೇಕು?

IPL 2024: ಐಪಿಎಲ್ ಸೀಸನ್ 17 ರಲ್ಲಿ ಆರ್​ಸಿಬಿ ತಂಡವು ಒಟ್ಟು 13 ಪಂದ್ಯಗಳನ್ನಾಡಿದೆ. ಈ ಹದಿಮೂರು ಮ್ಯಾಚ್​ಗಳಲ್ಲಿ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಫಾಫ್ ಪಡೆ ಇದೀಗ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಇನ್ನು ಆರ್​ಸಿಬಿ ತಂಡದ ಕೊನೆಯ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್​. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿದೆ.

TV9 Web
| Edited By: |

Updated on: May 13, 2024 | 8:07 AM

Share
IPL 2024: ಐಪಿಎಲ್ ಸೀಸನ್ 17 ರ ಪ್ಲೇಆಫ್ ರೇಸ್​ನಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ. ಒಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದರೆ, ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿದೆ. ಇದೀಗ ಸಿಎಸ್​ಕೆ ಅಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದರೆ, ಆರ್​ಸಿಬಿ 5ನೇ ಸ್ಥಾನಕ್ಕೆ ಬಂದು ನಿಂತಿದೆ.

1 / 7
ಇತ್ತ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿದೆ. ಹೀಗಾಗಿ ಈ ಪಂದ್ಯವು ಪ್ಲೇಆಫ್ ಹಂತಕ್ಕೇರಲು ಉಭಯ ತಂಡಗಳಿಗೆ ನಿರ್ಣಾಯಕ. ಈ ಮ್ಯಾಚ್​ನಲ್ಲಿ ಆರ್​ಸಿಬಿ ಗೆದ್ದರೆ ಟಾಪ್-4 ಹಂತಕ್ಕೇರಲಿದೆ.

2 / 7
ಆದರೆ ಇದೊಂದೇ ಪಂದ್ಯದ ಗೆಲುವಿನಿಂದ ಆರ್​ಸಿಬಿ ತಂಡದ ಪ್ಲೇಆಫ್ ಖಚಿತವಾಗುವುದಿಲ್ಲ. ಬದಲಾಗಿ ಅತ್ತ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಕೂಡ 12 ಅಂಕಗಳೊಂದಿಗೆ ಪ್ಲೇಆಫ್ ರೇಸ್​ನಲ್ಲಿದೆ. ಹೀಗಾಗಿ ಈ ತಂಡಗಳ ಫಲಿತಾಂಶ ಕೂಡ ಇಲ್ಲಿ ಮುಖ್ಯವಾಗುತ್ತದೆ.

3 / 7
ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಕೆಎಲ್ ರಾಹುಲ್ ಪಡೆ 16 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರುವುದು ಬಹುತೇಕ ಖಚಿತ. ಹೀಗಾಗಿ ಎಲ್​ಎಸ್​ಜಿ ತಂಡವು ಮುಂದಿನ 2 ಪಂದ್ಯಗಳಲ್ಲೂ ಸೋಲನುಭವಿಸಬೇಕು. ಅಥವಾ ಒಂದು ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಥವಾ ಮುಂಬೈ ಇಂಡಿಯನ್ಸ್ ಜಯ ಸಾಧಿಸಬೇಕು.

4 / 7
ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಒಂದು ಪಂದ್ಯವಿದ್ದು, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ರಿಷಭ್ ಪಂತ್ ಪಡೆ ಸಾಧಾರಣ ಗೆಲುವು ಸಾಧಿಸಬೇಕು. ಒಂದು ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಜಯ ಸಾಧಿಸಿದರೆ ಉತ್ತಮ ನೆಟ್​ ರನ್​ ರೇಟ್​ನೊಂದಿಗೆ ಒಟ್ಟು 14 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

5 / 7
ಇನ್ನು ಗುಜರಾತ್ ಟೈಟಾನ್ಸ್ ತಂಡವು 12 ಪಂದ್ಯಗಳಿಂದ ಒಟ್ಟು 10 ಅಂಕಗಳನ್ನು ಕಲೆಹಾಕಿದೆ. ಮುಂದಿನ 2 ಮ್ಯಾಚ್​ಗಳಲ್ಲಿ ಗುಜರಾತ್ ತಂಡವು ಅಮೋಘ ಗೆಲುವು ಸಾಧಿಸಿದರೆ 14 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಹೊಂದಿದೆ. ಹೀಗಾಗಿ ಜಿಟಿ ತಂಡದ ಒಂದು ಸೋಲನ್ನು ಆರ್​ಸಿಬಿ ಎದುರು ನೋಡಲಿದೆ.

6 / 7
ಈ ಸೋಲು-ಗೆಲುವುಗಳ ಲೆಕ್ಕಾಚಾರಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಬೇಕು. ಈ ಮೂಲಕ ಆರ್​ಸಿಬಿ ಪ್ಲೇಆಫ್ ಹಂತಕ್ಕೇರುವುದನ್ನು ಎದುರು ನೋಡುತ್ತಿದೆ. ಹೀಗಾಗಿ ಸಿಎಸ್​ಕೆ-ಆರ್​ಸಿಬಿ ನಡುವಣ ಅಂತಿಮ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಬಹುದು.

7 / 7
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!

ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?

ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್

ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು