IPL 2024: ಗುಜರಾತ್ ಟೈಟಾನ್ಸ್ ವಿರುದ್ಧ RCB ಪ್ಲೇಯಿಂಗ್ 11 ಹೀಗಿರಲಿದೆ

| Updated By: ಝಾಹಿರ್ ಯೂಸುಫ್

Updated on: Apr 27, 2024 | 2:26 PM

IPL 2024 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 9 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಉಳಿದ 7 ಪಂದ್ಯಗಳಲ್ಲಿ ಸೋತಿರುವ RCB ತಂಡ ಭಾನುವಾರ (ಏ.28) ಗುಜರಾತ್ ಟೈಟಾನ್ಸ್​ ವಿರುದ್ಧ ಕಣಕ್ಕಿಳಿಯಲಿದೆ.

1 / 14
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (SRH) ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಏ.27) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

2 / 14
ಏಕೆಂದರೆ ಕಳೆದ ಪಂದ್ಯದಲ್ಲಿ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಅದೇ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಲಿದೆ ಎಂದೇ ಹೇಳಬಹುದು. ಅದರಂತೆ ಗುಜರಾತ್ ಟೈಟಾನ್ಸ್​​​ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....

3 / 14
ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಕಣಕ್ಕಿಳಿಯುತ್ತಿರುವ ಫಾಫ್ ಡುಪ್ಲೆಸಿಸ್ ಈ ಪಂದ್ಯದಲ್ಲೂ ಆರಂಭಿಕನಾಗಿ ಇನಿಂಗ್ಸ್ ಆರಂಭಿಸಲಿದ್ದಾರೆ.

4 / 14
ವಿರಾಟ್ ಕೊಹ್ಲಿ: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಕಿಂಗ್ ಕೊಹ್ಲಿ ಸದ್ಯ ಆರೆಂಜ್ ಕ್ಯಾಪ್​ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅದರಂತೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿದು ಮತ್ತಷ್ಟು ರನ್ ಪೇರಿಸುವ ನಿರೀಕ್ಷೆಯಿದೆ.

5 / 14
ವಿಲ್ ಜಾಕ್ಸ್: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದ ವಿಲ್ ಜಾಕ್ಸ್ ​ಎಸ್​ಆರ್​ಹೆಚ್ ವಿರುದ್ಧ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಇದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧ ಜಾಕ್ಸ್​ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಖಚಿತ.

6 / 14
ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್, ಕೆಕೆಆರ್ ಹಾಗೂ ಎಸ್​ಆರ್​ಹೆಚ್​ ವಿರುದ್ಧ ಸ್ಪೋಟಕ ಅರ್ಧಶತಕ ಬಾರಿಸಿ ಮಿಂಚಿರುವ ರಜತ್ ಪಾಟಿದಾರ್​ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

7 / 14
ಕ್ಯಾಮರೋನ್ ಗ್ರೀನ್: ಎಸ್​ಆರ್​ಹೆಚ್​ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿರುವ ಕ್ಯಾಮರೋನ್ ಗ್ರೀನ್ ಗುಜರಾತ್ ಟೈಟಾನ್ಸ್ ವಿರುದ್ಧ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.

8 / 14
ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ವಿಕೆಟ್ ಕೀಪರ್ ಸ್ಥಾನದಲ್ಲಿ ಸ್ಪೋಟಕ ದಾಂಡಿಗ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದು ಖಚಿತ.

9 / 14
ಮಹಿಪಾಲ್ ಲೋಮ್ರರ್: ಎಡಗೈ ದಾಂಡಿಗ ಮಹಿಪಾಲ್ ಲೋಮ್ರರ್ ಕಳೆದ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಇದಾಗ್ಯೂ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅವರಿಗೆ ಮತ್ತೊಂದು ಅವಕಾಶ ನೀಡುವ ಸಾಧ್ಯತೆಯಿದೆ.

10 / 14
ಕರ್ಣ್ ಶರ್ಮಾ: ಆರ್​ಸಿಬಿ ಪರ ಕಳೆದ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿರುವ ಕರ್ಣ್ ಶರ್ಮಾ ಮುಂದಿನ ಪಂದ್ಯದಲ್ಲೂ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಅಹಮದಬಾದ್​ನ ಪಿಚ್​ ಸ್ಪಿನ್ ಬೌಲರ್​ಗಳಿಗೆ ಸಹಕಾರಿ.

11 / 14
ಮೊಹಮ್ಮದ್ ಸಿರಾಜ್: ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿರುವ ಮೊಹಮ್ಮದ್ ಸಿರಾಜ್ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ.

12 / 14
ಲಾಕಿ ಫರ್ಗುಸನ್: ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ್ದ ಲಾಕಿ ಫರ್ಗುಸನ್​ಗೆ ಅಹಮದಾಬಾದ್ ಪಿಚ್​ನಲ್ಲಿ ಆಡಿದ ಹೆಚ್ಚಿನ ಅನುಭವವಿದೆ. ಹೀಗಾಗಿ ಆರ್​ಸಿಬಿ ಫರ್ಗುಸನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

13 / 14
ಯಶ್ ದಯಾಳ್: ಆರ್​ಸಿಬಿ ಪರ ಎಡಗೈ ವೇಗಿ ಯಶ್ ದಯಾಳ್ ಕೂಡ ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಕಳೆದ ಪಂದ್ಯದಲ್ಲಿ ದಯಾಳ್ 3 ಓವರ್​ಗಳಲ್ಲಿ ನೀಡಿದ್ದು ಕೇವಲ 18 ರನ್​ಗಳು ಮಾತ್ರ.

14 / 14
ಸ್ವಪ್ನಿಲ್ ಸಿಂಗ್: ಆರ್​ಸಿಬಿ ತಂಡವು ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ವಪ್ನಿಲ್ ಸಿಂಗ್ ಅವರನ್ನು ಕಣಕ್ಕಿಳಿಸಲಿದೆ. ಕಳೆದ ಪಂದ್ಯದಲ್ಲಿ ಇಂಪ್ಯಾಕ್ಟ್ ಸಬ್ ಆಗಿ ಕಣಕ್ಕಿಳಿದ ಸ್ವಪ್ನಿಲ್ 12 ರನ್ ಬಾರಿಸಿದ್ದಲ್ಲದೆ, 2 ವಿಕೆಟ್ ಪಡೆದು ಮಿಂಚಿದ್ದರು. ಹೀಗಾಗಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ವಪ್ನಿಲ್ ಆರ್​ಸಿಬಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.