
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮೇ 12) ನಡೆಯಲಿರುವ ಈ ಪಂದ್ಯವು ಆರ್ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಪಂದ್ಯದಲ್ಲಿ ಫಾಫ್ ಪಡೆ ಗೆದ್ದರೆ ಪ್ಲೇಆಫ್ ಆಸೆ ಜೀವಂತವಿರಲಿದೆ. ಹೀಗಾಗಿ ಈ ಪಂದ್ಯದಲ್ಲಿ ಆರ್ಸಿಬಿ ಬಲಿಷ್ಠ ಬಳಗವನ್ನೇ ಕಣಕ್ಕಿಳಿಸಲಿದೆ.

ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಆಡಿದ ಆಟಗಾರರೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಕಣಕ್ಕಿಳಿಯಲಿದ್ದಾರೆ ಎನ್ನಬಹುದು. ಏಕೆಂದರೆ ಬೆಂಗಳೂರು ಪಿಚ್ ಬ್ಯಾಟರ್ಗಳ ಪಾಲಿಗೆ ಸ್ವರ್ಗ. ಇತ್ತ ಆರ್ಸಿಬಿ ಬೌಲರ್ಗಳು ದುಬಾರಿಯಾಗಿ ಪರಿಣಮಿಸುತ್ತಿದ್ದಾರೆ.

ಇದೇ ಕಾರಣದಿಂದಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಆಡುವ ಬಳಗದಲ್ಲಿ ಬ್ಯಾಟರ್ಗಳಿಗೆ ಮಣೆ ಹಾಕಿದ್ದರು. ಇದೇ ರಣತಂತ್ರದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

1- ಫಾಫ್ ಡುಪ್ಲೆಸಿಸ್: ಈ ಬಾರಿಯ ಐಪಿಎಲ್ನಲ್ಲಿ 12 ಇನಿಂಗ್ಸ್ ಆಡಿರುವ ಫಾಫ್ ಡುಪ್ಲೆಸಿಸ್ 3 ಅರ್ಧಶತಕಗಳೊಂದಿಗೆ ಒಟ್ಟು 361 ರನ್ ಕಲೆಹಾಕಿದ್ದಾರೆ. ಅಲ್ಲದೆ ಆರ್ಸಿಬಿ ತಂಡದ ನಾಯಕರಾಗಿರುವ ಕಾರಣ ಅವರು ಮುಂದಿನ ಪಂದ್ಯದಲ್ಲೂ ಕಣಕ್ಕಿಳಿಯುವುದು ಖಚಿತ.

2- ವಿರಾಟ್ ಕೊಹ್ಲಿ: ಭರ್ಜರಿ ಫಾರ್ಮ್ನಲ್ಲಿರುವ ಕಿಂಗ್ ಕೊಹ್ಲಿ ಈವರೆಗೆ ಆಡಿದ 12 ಇನಿಂಗ್ಸ್ಗಳಿಂದ ಒಟ್ಟು 634 ರನ್ ಕಲೆಹಾಕಿದ್ದಾರೆ. ಈ ವೇಳೆ 5 ಅರ್ಧಶತಕ ಹಾಗೂ 1 ಶತಕ ಸಿಡಿಸಿ ಮಿಂಚಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ಕೂಡ ಕೊಹ್ಲಿಯೇ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

3- ವಿಲ್ ಜಾಕ್ಸ್: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ವಿಲ್ ಜಾಕ್ಸ್ ಕೇವಲ 41 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ್ದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೂಡ ಜಾಕ್ಸ್ 3ನೇ ಕ್ರಮಾಂಕದಲ್ಲೇ ಆಡಲಿದ್ದಾರೆ ಎನ್ನಬಹುದು.

4- ರಜತ್ ಪಾಟಿದಾರ್: ಈ ಬಾರಿ ಆರ್ಸಿಬಿ ಆಡಿದ 12 ಪಂದ್ಯಗಳಲ್ಲೂ ಕಣಕ್ಕಿಳಿದಿರುವ ರಜತ್ ಪಾಟಿದಾರ್ 4 ಅರ್ಧಶತಕಗಳೊಂದಿಗೆ ಒಟ್ಟು 258 ರನ್ ಕಲೆಹಾಕಿದ್ದಾರೆ. ಹೀಗಾಗಿ 4ನೇ ಕ್ರಮಾಂಕದಲ್ಲಿ ಪಾಟಿದಾರ್ ಅವರನ್ನು ಎದುರು ನೋಡಬಹುದು.

5- ಕ್ಯಾಮರೋನ್ ಗ್ರೀನ್: 10 ಪಂದ್ಯಗಳನ್ನಾಡಿರುವ ಕ್ಯಾಮರೋನ್ ಗ್ರೀನ್ 238 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದಾರೆ. ಇದಾಗ್ಯೂ ಬೌಲಿಂಗ್ನಲ್ಲಿ 7 ವಿಕೆಟ್ ಪಡೆದಿರುವ ಕಾರಣ ಆಲ್ರೌಂಡರ್ ಆಗಿ ಗ್ರೀನ್ ಅವರನ್ನೇ ಆರ್ಸಿಬಿ ಕಣಕ್ಕಿಳಿಸಲಿದೆ.

6- ದಿನೇಶ್ ಕಾರ್ತಿಕ್: ಆರ್ಸಿಬಿ ತಂಡದ ಫಿನಿಶರ್ ಪಾತ್ರದಲ್ಲಿ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ. ಡಿಕೆ ಈವರೆಗೆ 301 ರನ್ ಕಲೆಹಾಕಿದ್ದು, ಈ ವೇಳೆ 2 ಅರ್ಧಶತಕಗಳನ್ನೂ ಸಹ ಬಾರಿಸಿದ್ದಾರೆ.

7- ಸ್ವಪ್ನಿಲ್ ಸಿಂಗ್: ಕಳೆದ ನಾಲ್ಕು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸ್ಪಿನ್ ಆಲ್ರೌಂಡರ್ ಸ್ವಪ್ನಿಲ್ ಸಿಂಗ್ 5 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಬ್ಯಾಟಿಂಗ್ ಮಾಡಬಲ್ಲ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸ್ವಪ್ನಿಲ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

8- ಕರ್ಣ್ ಶರ್ಮಾ: ಅನುಭವಿ ಸ್ಪಿನ್ನರ್ ಕರ್ಣ್ ಶರ್ಮಾ ಈ ಬಾರಿ ಕೇವಲ 6 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದಾರೆ. ಈ ವೇಳೆ 6 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕರ್ಣ್ ಶರ್ಮಾ ಕೂಡ ಕಾಣಿಸಿಕೊಳ್ಳಲಿದ್ದಾರೆ.

9- ಮೊಹಮ್ಮದ್ ಸಿರಾಜ್: 11 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಸಿರಾಜ್ ಈವರೆಗೆ 11 ವಿಕೆಟ್ಗಳನ್ನು ಕಬಳಿಸಿ ಮಿಂಚಿದ್ದಾರೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಆರ್ಸಿಬಿ ಪರ ಸಿರಾಜ್ ಬೌಲಿಂಗ್ ಆರಂಭಿಸುವುದನ್ನು ಎದುರು ನೋಡಬಹುದು.

10- ಲಾಕಿ ಫರ್ಗುಸನ್: ಗುಜರಾತ್ ಟೈಟಾನ್ಸ್ ವಿರುದ್ಧದ ಕಳೆದ ಪಂದ್ಯದಲ್ಲಿ ವೇಗಿ ಲಾಕಿ ಫರ್ಗುಸನ್ ಸ್ಥಾನ ಪಡೆದಿದ್ದರು. ಅಲ್ಲದೆ ಈ ಬಾರಿ 4 ಪಂದ್ಯಗಳನ್ನಾಡಿರುವ ಫರ್ಗುಸನ್ ಒಟ್ಟು 5 ವಿಕೆಟ್ ಕಬಳಿಸಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಲಾಕಿ ಫರ್ಗುಸನ್ ಆಡುವ ಸಾಧ್ಯತೆಯಿದೆ.

11- ಯಶ್ ದಯಾಳ್: ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ಪರ ಉತ್ತಮ ಬೌಲಿಂಗ್ ಪ್ರದರ್ಶಿಸಿರುವ ಯಶ್ ದಯಾಳ್ ಈವರೆಗೆ ಒಟ್ಟು 10 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಎಡಗೈ ವೇಗಿ ಕಣಕ್ಕಿಳಿಯಲಿದ್ದಾರೆ.