IPL 2024: ಬಲಿಷ್ಠ ಬಳಗವನ್ನೇ ಕಣಕ್ಕಿಳಿಸಲಿದೆ RCB

IPL 2024 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ ಮೂರು ಮ್ಯಾಚ್​ಗಳಲ್ಲಿ ಮಾತ್ರ. ಇದೀಗ ತನ್ನ 11ನೇ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಕಳೆದ ಪಂದ್ಯದಲ್ಲಿ ಜಿಟಿ ವಿರುದ್ಧ ಜಯ ಸಾಧಿಸಿದ್ದ ಆರ್​ಸಿಬಿ ಈ ಬಾರಿ ಕೂಡ ಗೆಲ್ಲುವ ಫೇವರೇಟ್ ತಂಡವೆನಿಸಿಕೊಂಡಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 02, 2024 | 1:52 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 52ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 5 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಪಂದ್ಯದಲ್ಲಿ ಫಾಫ್ ಪಡೆ ಗೆದ್ದರೆ ಪ್ಲೇಆಫ್ ಆಸೆ ಜೀವಂತವಿರಲಿದೆ. ಹೀಗಾಗಿ ಈ ಪಂದ್ಯದಲ್ಲಿ ಆರ್​ಸಿಬಿ ಬಲಿಷ್ಠ ಬಳಗವನ್ನೇ ಕಣಕ್ಕಿಳಿಸಲಿದೆ.

1 / 14
ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್​ಸಿಬಿ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಆಡಿದ ಆಟಗಾರರೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಕಣಕ್ಕಿಳಿಯಲಿದ್ದಾರೆ ಎನ್ನಬಹುದು. ಏಕೆಂದರೆ ಬೆಂಗಳೂರು ಪಿಚ್​ ಬ್ಯಾಟರ್​ಗಳ ಪಾಲಿಗೆ ಸ್ವರ್ಗ. ಇತ್ತ ಆರ್​ಸಿಬಿ ಬೌಲರ್​ಗಳು ದುಬಾರಿಯಾಗಿ ಪರಿಣಮಿಸುತ್ತಿದ್ದಾರೆ.

2 / 14
ಇದೇ ಕಾರಣದಿಂದಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಲಾಕಿ ಫರ್ಗುಸನ್ ಹಾಗೂ ರೀಸ್ ಟೋಪ್ಲಿಯಂತಹ ಬೌಲರ್​ಗಳನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಟ್ಟಿದ್ದರು. ಅಲ್ಲದೆ ಕ್ಯಾಮರೋನ್ ಗ್ರೀನ್ ಹಾಗೂ ಗ್ಲೆನ್ ಮ್ಯಾಕ್ಸ್​​ವೆಲ್​ಗೆ ಚಾನ್ಸ್ ನೀಡಿದ್ದರು. ಇದೇ ರಣತಂತ್ರದೊಂದಿಗೆ ಆರ್​ಸಿಬಿ ಮುಂದಿನ ಪಂದ್ಯದಲ್ಲೂ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

3 / 14
1- ಫಾಫ್ ಡುಪ್ಲೆಸಿಸ್: ಈ ಬಾರಿಯ ಐಪಿಎಲ್​ನಲ್ಲಿ 10 ಇನಿಂಗ್ಸ್ ಆಡಿರುವ ಫಾಫ್ ಡುಪ್ಲೆಸಿಸ್ 2 ಅರ್ಧಶತಕಗಳೊಂದಿಗೆ ಒಟ್ಟು 288 ರನ್ ಕಲೆಹಾಕಿದ್ದಾರೆ. ಅಲ್ಲದೆ ಆರ್​ಸಿಬಿ ತಂಡದ ನಾಯಕರಾಗಿರುವ ಕಾರಣ ಅವರು ಮುಂದಿನ ಪಂದ್ಯದಲ್ಲೂ ಕಣಕ್ಕಿಳಿಯುವುದು ಖಚಿತ.

4 / 14
2- ವಿರಾಟ್ ಕೊಹ್ಲಿ: ಭರ್ಜರಿ ಫಾರ್ಮ್​ನಲ್ಲಿರುವ ಕಿಂಗ್ ಕೊಹ್ಲಿ ಈವರೆಗೆ ಆಡಿದ 10 ಇನಿಂಗ್ಸ್​ಗಳಿಂದ ಒಟ್ಟು 500 ರನ್ ಕಲೆಹಾಕಿದ್ದಾರೆ. ಈ ವೇಳೆ 4 ಅರ್ಧಶತಕ ಹಾಗೂ 1 ಶತಕ ಸಿಡಿಸಿ ಮಿಂಚಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ಕೂಡ ಕೊಹ್ಲಿಯೇ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

5 / 14
3- ವಿಲ್ ಜಾಕ್ಸ್​: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ವಿಲ್ ಜಾಕ್ಸ್ ಕೇವಲ 41 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ್ದರು. ಹೀಗಾಗಿ ಮುಂದಿನ ಪಂದ್ಯದಲ್ಲೂ ಜಾಕ್ಸ್ 3ನೇ ಕ್ರಮಾಂಕದಲ್ಲೇ ಆಡಲಿದ್ದಾರೆ ಎನ್ನಬಹುದು.

6 / 14
4- ರಜತ್ ಪಾಟಿದಾರ್: ಈ ಬಾರಿ ಆರ್​ಸಿಬಿ ಆಡಿದ 10 ಪಂದ್ಯಗಳಲ್ಲೂ ಕಣಕ್ಕಿಳಿದಿರುವ ರಜತ್ ಪಾಟಿದಾರ್ 3 ಅರ್ಧಶತಕಗಳೊಂದಿಗೆ ಒಟ್ಟು 211 ರನ್ ಕಲೆಹಾಕಿದ್ದಾರೆ. ಹೀಗಾಗಿ 4ನೇ ಕ್ರಮಾಂಕದಲ್ಲಿ ಪಾಟಿದಾರ್ ಅವರನ್ನು ಎದುರು ನೋಡಬಹುದು.

7 / 14
5- ಗ್ಲೆನ್ ಮ್ಯಾಕ್ಸ್​ವೆಲ್: 7 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಗ್ಲೆನ್ ಮ್ಯಾಕ್ಸ್​ವೆಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಈವರೆಗೆ ಕೇವಲ 32 ರನ್ ಮಾತ್ರ ಕಲೆಹಾಕಿರುವ ಮ್ಯಾಕ್ಸಿ, ಬೌಲಿಂಗ್​ನಲ್ಲಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲೂ ಆಲ್​ರೌಂಡರ್ ಆಗಿ ಮ್ಯಾಕ್ಸ್​ವೆಲ್ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

8 / 14
6- ಕ್ಯಾಮರೋನ್ ಗ್ರೀನ್: 8 ಪಂದ್ಯಗಳನ್ನಾಡಿರುವ ಕ್ಯಾಮರೋನ್ ಗ್ರೀನ್ 111 ರನ್​ ಕಲೆಹಾಕಲಷ್ಟೇ ಶಕ್ತರಾಗಿದ್ದಾರೆ. ಇದಾಗ್ಯೂ ಬೌಲಿಂಗ್​ನಲ್ಲಿ 6 ವಿಕೆಟ್ ಪಡೆದಿರುವ ಕಾರಣ ಆಲ್​ರೌಂಡರ್ ಆಗಿ ಗ್ರೀನ್ ಅವರನ್ನೇ ಆರ್​ಸಿಬಿ ಕಣಕ್ಕಿಳಿಸಲಿದೆ.

9 / 14
7- ದಿನೇಶ್ ಕಾರ್ತಿಕ್: ಆರ್​ಸಿಬಿ ತಂಡದ ಫಿನಿಶರ್ ಪಾತ್ರದಲ್ಲಿ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ. ಡಿಕೆ ಈವರೆಗೆ 262 ರನ್ ಕಲೆಹಾಕಿದ್ದು, ಈ ವೇಳೆ 2 ಅರ್ಧಶತಕಗಳನ್ನೂ ಸಹ ಬಾರಿಸಿದ್ದಾರೆ.

10 / 14
8- ಸ್ವಪ್ನಿಲ್ ಸಿಂಗ್: ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸ್ಪಿನ್ ಆಲ್​ರೌಂಡರ್ ಸ್ವಪ್ನಿಲ್ ಸಿಂಗ್ 3 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಬ್ಯಾಟಿಂಗ್ ಮಾಡಬಲ್ಲ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ಸ್ವಪ್ನಿಲ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

11 / 14
9- ಕರ್ಣ್ ಶರ್ಮಾ: ಅನುಭವಿ ಸ್ಪಿನ್ನರ್ ಕರ್ಣ್ ಶರ್ಮಾ ಈ ಬಾರಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದಾರೆ. ಈ ವೇಳೆ 3 ವಿಕೆಟ್​ಗಳನ್ನು ಕಬಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಲ್ಲೆ ಎಂಬುದನ್ನು ನಿರೂಪಿಸಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧ ಕರ್ಣ್ ಶರ್ಮಾ ಕೂಡ ಕಾಣಿಸಿಕೊಳ್ಳಲಿದ್ದಾರೆ.

12 / 14
10- ಮೊಹಮ್ಮದ್ ಸಿರಾಜ್: ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುವುದು ಖಚಿತ. ಏಕೆಂದರೆ ಕಳೆದ ಪಂದ್ಯದಲ್ಲಿ 4 ಓವರ್​ಗಳಲ್ಲಿ ಕೇವಲ 34 ರನ್ ನೀಡಿ 1 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಆರ್​ಸಿಬಿ ಪರ ಸಿರಾಜ್ ಬೌಲಿಂಗ್ ಆರಂಭಿಸುವುದನ್ನು ಎದುರು ನೋಡಬಹುದು.

13 / 14
11- ಯಶ್ ದಯಾಳ್: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಉತ್ತಮ ಬೌಲಿಂಗ್ ಪ್ರದರ್ಶಿಸಿರುವ ಯಶ್ ದಯಾಳ್ ಈವರೆಗೆ ಒಟ್ಟು 8 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲೂ ಎಡಗೈ ವೇಗಿ ಕಣಕ್ಕಿಳಿಯಲಿದ್ದಾರೆ.

14 / 14
Follow us