IPL 2024: RCB ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ ಸಾಧ್ಯತೆ
TV9 Web | Updated By: ಝಾಹಿರ್ ಯೂಸುಫ್
Updated on:
Apr 24, 2024 | 1:02 PM
IPL 2024 RCB vs SRH: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 8 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ 7 ಪಂದ್ಯಗಳಲ್ಲಿ ಸೋತಿರುವ ಆರ್ಸಿಬಿ ತಂಡ ಗುರುವಾರ (ಏ.25) ಎಸ್ಆರ್ಹೆಚ್ ವಿರುದ್ಧ ಕಣಕ್ಕಿಳಿಯಲಿದೆ.
1 / 13
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಏ.25) ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಎರಡು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ.
2 / 13
ಏಕೆಂದರೆ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿರುವ ಗ್ಲೆನ್ ಮ್ಯಾಕ್ಸ್ವೆಲ್ ಈ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚು. ಏಕೆಂದರೆ ಮ್ಯಾಕ್ಸ್ವೆಲ್ ಸ್ಥಾನದಲ್ಲಿ ಆಡಿದ ಕ್ಯಾಮರೋನ್ ಗ್ರೀನ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ಹೈದರಾಬಾದ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಕಣಕ್ಕಿಳಿಯಲಿದ್ದಾರೆ ಎಂದೇ ಹೇಳಬಹುದು. ಅದರಂತೆ ಎಸ್ಆರ್ಹೆಚ್ ವಿರುದ್ಧದ ಪಂದ್ಯಕ್ಕೆ ಆರ್ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ....
3 / 13
ಫಾಫ್ ಡುಪ್ಲೆಸಿಸ್: ಆರ್ಸಿಬಿ ತಂಡದ ನಾಯಕನಾಗಿ ಫಾಫ್ ಡುಪ್ಲೆಸಿಸ್ ಈ ಪಂದ್ಯದಲ್ಲೂ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಆರಂಭಿಕನಾಗಿ ಬ್ಯಾಟ್ ಬೀಸಲಿದ್ದಾರೆ.
4 / 13
ವಿರಾಟ್ ಕೊಹ್ಲಿ: ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿರುವ ವಿರಾಟ್ ಕೊಹ್ಲಿ ಎಸ್ಆರ್ಹೆಚ್ ವಿರುದ್ಧದ ಪಂದ್ಯದಲ್ಲೂ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.
5 / 13
ವಿಲ್ ಜಾಕ್ಸ್: ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿರುವ ವಿಲ್ ಜಾಕ್ಸ್ ಎಸ್ಆರ್ಹೆಚ್ ವಿರುದ್ಧದ ಪಂದ್ಯದಲ್ಲೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ.
6 / 13
ರಜತ್ ಪಾಟಿದಾರ್: ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿರುವ ರಜತ್ ಪಾಟಿದಾರ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.
7 / 13
ಗ್ಲೆನ್ ಮ್ಯಾಕ್ಸ್ವೆಲ್: ಕಳೆದ ಎರಡು ಪಂದ್ಯಗಳಿಂದ ಹೊರಗುಳಿದಿರುವ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದ್ದು, ಅದರಂತೆ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
8 / 13
ಅನೂಜ್ ರಾವತ್: ಮೊದಲ ಎರಡು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಎಡಗೈ ದಾಂಡಿಗ ಅನೂಜ್ ರಾವತ್ ಈಡನ್ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.
9 / 13
ದಿನೇಶ್ ಕಾರ್ತಿಕ್: ಆರ್ಸಿಬಿ ತಂಡದ ಫಿನಿಶರ್ ಪಾತ್ರದಲ್ಲಿ ಭರ್ಜರಿ ಫಾರ್ಮ್ನಲ್ಲಿರುವ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳುವುದು ಖಚಿತ.
10 / 13
ಕರ್ಣ್ ಶರ್ಮಾ: ಆರ್ಸಿಬಿ ಪರ ಕಳೆದ ಪಂದ್ಯದಲ್ಲಿ ಆಲ್ರೌಂಡರ್ ಪ್ರದರ್ಶನದೊಂದಿಗೆ ಗಮನ ಸೆಳೆದಿರುವ ಕರ್ಣ್ ಶರ್ಮಾ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೂಡ ಕಣಕ್ಕಿಳಿಯಲಿದ್ದಾರೆ.
11 / 13
ಟಾಮ್ ಕರನ್: ಕಳೆದ ಕೆಲ ಪಂದ್ಯಗಳಿಂದ ಕಳಪೆ ಪ್ರದರ್ಶನ ನೀಡಿರುವ ರೀಸ್ ಟೋಪ್ಲಿ ಬದಲಿಗೆ ಈ ಬಾರಿ ಆಲ್ರೌಂಡರ್ ಟಾಮ್ ಕರನ್ಗೆ ಅವಕಾಶ ನೀಡುವ ಸಾಧ್ಯತೆಯಿದೆ.
12 / 13
ಮೊಹಮ್ಮದ್ ಸಿರಾಜ್: ಎಸ್ಆರ್ಹೆಚ್ ವಿರುದ್ಧದ ಪಂದ್ಯದಲ್ಲೂ ಮೊಹಮ್ಮದ್ ಸಿರಾಜ್ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂ ಸಿರಾಜ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಅಲ್ಲಿನ ಪಿಚ್ನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.
13 / 13
ಯಶ್ ದಯಾಳ್: ಆರ್ಸಿಬಿ ಪರ ಎಡಗೈ ವೇಗಿ ಯಶ್ ದಯಾಳ್ ಕೂಡ ಕಾಣಿಸಿಕೊಳ್ಳಬಹುದು. ಏಕೆಂದರೆ ಪ್ರಸ್ತುತ ತಂಡದಲ್ಲಿರುವ ಏಕೈಕ ಭಾರತೀಯ ಎಡಗೈ ವೇಗಿಯಾಗಿರುವ ದಯಾಳ್ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
Published On - 12:42 pm, Wed, 24 April 24