IPL 2024: ಬೆಂಗಳೂರಿನಲ್ಲಿ RCBಗೆ ಗೆಲುವು ಅಂದುಕೊಂಡಷ್ಟು ಸುಲಭವಲ್ಲ..!

IPL 2024 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 6ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ IPL 2024 ರಲ್ಲಿ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ RCB.

TV9 Web
| Updated By: ಝಾಹಿರ್ ಯೂಸುಫ್

Updated on:Mar 25, 2024 | 1:18 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024)​ ಸೀಸನ್ 17ರ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಮುಗ್ಗರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿ ನಿಂತಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.25) ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು ಎದುರಿಸಲಿದೆ​.

1 / 8
ಇತ್ತ ತವರಿನಲ್ಲಿ ಪಂದ್ಯ ನಡೆಯುತ್ತಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆಯಾ? ಎಂಬ ಪ್ರಶ್ನೆಗೆ ಉತ್ತರ ಸ್ಪಷ್ಟ.. ನೋ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಗೆದ್ದಿದ್ದಕ್ಕಿಂತ ಸೋತಿರುವುದೇ ಜಾಸ್ತಿ.

2 / 8
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡವು ಇದುವರೆಗೆ 84 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 39 ಮ್ಯಾಚ್​ಗಳಲ್ಲಿ ಮಾತ್ರ. ಇನ್ನು 40 ಪಂದ್ಯಗಳಲ್ಲಿ ಸೋಲನುಭವಿಸಿದೆ. ಹಾಗೆಯೇ 4 ಪಂದ್ಯಗಳು ಕಾರಣಾಂತರಗಳಿಂದ ಫಲಿತಾಂಶರಹಿತವಾಗಿತ್ತು.

3 / 8
ಅಂದರೆ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಎದುರಾಳಿ ತಂಡ ಕೂಡ ಶೇ.50 ರಷ್ಟು ಗೆಲುವಿನ ಸರಾಸರಿ ಹೊಂದಿದೆ. ಹೀಗಾಗಿಯೇ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲ್ಲುವುದು ಕೂಡ ಅಂದುಕೊಂಡಷ್ಟು ಸುಲಭವಲ್ಲ.

4 / 8
ಅತ್ತ ಪಂಜಾಬ್ ಪಡೆಯಲ್ಲಿ ಸ್ಯಾಮ್ ಕರನ್, ಲಿಯಾಮ್ ಲಿವಿಂಗ್​ಸ್ಟೋನ್, ಸಿಕಂದರ್ ರಾಝ ಅವರಂತಹ ಸ್ಟಾರ್ ಆಲ್​ರೌಂಡರ್​ಗಳ ದಂಡೇ ಇದ್ದು, ಈ ಆಟಗಾರರು ಯಾವುದೇ ಹಂತದಲ್ಲೂ ಪಂದ್ಯದ ಗತಿಯನ್ನೇ ಬದಲಿಸಬಲ್ಲರು. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂಜಾಬ್ ಕಡೆಯಿಂದ ಪರಾಕ್ರಮ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.

5 / 8
ಇನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಭಯ ತಂಡಗಳು ಇದುವರೆಗೆ 11 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ 6 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದರೆ, 5 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸುವಲ್ಲಿ ಪಂಜಾಬ್ ಕಿಂಗ್ಸ್ ಯಶಸ್ವಿಯಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಪಂಜಾಬ್ ಪಡೆಯಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

6 / 8
ಪಂಜಾಬ್ ಕಿಂಗ್ಸ್​ ತಂಡ: ಶಿಖರ್ ಧವನ್ (ನಾಯಕ), ಮ್ಯಾಥ್ಯೂ ಶಾರ್ಟ್, ಪ್ರಭ್​ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ಸಿಕಂದರ್ ರಾಝ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೈಡೆ, ಅರ್ಷ್‌ದೀಪ್ ಸಿಂಗ್, ನಾಥನ್ ಎಲ್ಲಿಸ್, ಸ್ಯಾಮ್ ಕರನ್, ಕಗಿಸೊ ರಬಾಡ, ಹರ್‌ಪ್ರೀತ್ ಬ್ರಾರ್, ರಾಹುಲ್ ಚಹರ್ , ಹರ್‌ಪ್ರೀತ್ ಭಾಟಿಯಾ, ವಿದ್ವತ್ ಕಾವೇರಪ್ಪ, ಶಿವಂ ಸಿಂಗ್, ಹರ್ಷಲ್ ಪಟೇಲ್, ಕ್ರಿಸ್ ವೋಕ್ಸ್, ಅಶುತೋಷ್ ಶರ್ಮಾ, ವಿಶ್ವನಾಥ್ ಪ್ರತಾಪ್ ಸಿಂಗ್, ಶಶಾಂಕ್ ಸಿಂಗ್, ತನಯ್ ತ್ಯಾಗರಾಜನ್, ಪ್ರಿನ್ಸ್, ರೈಲಿ ರೊಸ್ಸೊವ್.

7 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

8 / 8

Published On - 10:57 am, Mon, 25 March 24

Follow us