ಈ ಬಾರಿಯ ಐಪಿಎಲ್ನಲ್ಲಿ (IPL 2024) ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲಾರ್ಧದ 7 ಪಂದ್ಯಗಳಲ್ಲಿ ಆರ್ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ.
ಸಿಎಸ್ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಆರ್ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲನುಭವಿಸಿದೆ.
ಈ ಮೂಲಕ ಮೊದಲಾರ್ಧದ ಮುಕ್ತಾಯದ ವೇಳೆಗೆ ಆರ್ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನು ದ್ವಿತೀಯಾರ್ಧಕ್ಕಾಗಿ ಸಜ್ಜಾಗುತ್ತಿರುವ ಆರ್ಸಿಬಿ ಬಲಿಷ್ಠ ಎದುರಾಳಿಗಳ ವಿರುದ್ಧ ಕಣಕ್ಕಿಳಿಯಬೇಕಿದೆ. ಅದರಂತೆ ಆರ್ಸಿಬಿ ತಂಡದ ಮುಂದಿನ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ...
KKR vs RCB: ಏಪ್ರಿಲ್ 21 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿರುವ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ.
SRH vs RCB: ಏಪ್ರಿಲ್ 25 ರಂದು ಆರ್ಸಿಬಿ ಮತ್ತು ಎಸ್ಆರ್ಹೆಚ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿದೆ.
GT vs RCB: ಏಪ್ರಿಲ್ 28 ರಂದು ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಾಳಿ ಗುಜರಾತ್ ಟೈಟಾನ್ಸ್. ಈ ಪಂದ್ಯವು ಅಹಮದಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿದೆ.
RCB vs GT: ಮೇ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
PBKS vs RCB: ಮೇ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.
RCB vs DC: ಮೇ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.
RCB vs CSK: ಮೇ 18 ರಂದು ನಡೆಯಲಿರುವ ತನ್ನ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ.