IPL 2024: RCB ತಂಡದ ಕೊನೆಯ 4 ಪಂದ್ಯಗಳು ಯಾರ ವಿರುದ್ಧ? ಇಲ್ಲಿದೆ ಸಂಪೂರ್ಣ ಮಾಹಿತಿ
TV9 Web | Updated By: ಝಾಹಿರ್ ಯೂಸುಫ್
Updated on:
Apr 29, 2024 | 2:24 PM
IPL 2024 RCB: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2024) ಆರ್ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಈ ಹತ್ತು ಮ್ಯಾಚ್ಗಳಲ್ಲಿ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಇದೀಗ ಅಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿರುವ ಆರ್ಸಿಬಿ ಇನ್ನೂ 4 ಪಂದ್ಯಗಳನ್ನಾಡಬೇಕಿದೆ. ಆ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ...
1 / 6
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರಲ್ಲಿ ಸೋಲಿನೊಂದಿಗೆ ಅಭಿಯಾನ ಆರಂಭಿಸಿದ್ದ ಆರ್ಸಿಬಿ ಇದೀಗ ಬ್ಯಾಕ್ ಟು ಬ್ಯಾಕ್ ಗೆಲುವಿನೊಂದಿಗೆ ಜಯದ ಟ್ರ್ಯಾಕ್ಗೆ ಮರಳಿದೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಬೀಗಿದ್ದ ಆರ್ಸಿಬಿ, ಗುಜರಾತ್ ಟೈಟಾನ್ಸ್ ತಂಡಕ್ಕೂ ಸೋಲುಣಿಸಿ ಇದೀಗ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಇನ್ನು ಲೀಗ್ ಹಂತದಲ್ಲಿ ಆರ್ಸಿಬಿ ತಂಡಕ್ಕೆ ಉಳಿದಿರುವುದು ಕೇವಲ 4 ಮ್ಯಾಚ್ಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಆರ್ಸಿಬಿ ತಂಡದ ಎದುರಾಳಿಗಳು ಯಾರೆಂದರೆ....
2 / 6
RCB vs GT: ಮೇ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
3 / 6
PBKS vs RCB: ಮೇ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.
4 / 6
RCB vs DC: ಮೇ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.
5 / 6
RCB vs CSK: ಮೇ 18 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದೊಂದಿಗೆ ಆರ್ಸಿಬಿ ತಂಡದ ಲೀಗ್ ಮ್ಯಾಚ್ಗಳು ಪೂರ್ಣಗೊಳ್ಳಲಿದೆ.
6 / 6
ಈ ಮೇಲಿನ ನಾಲ್ಕು ಪಂದ್ಯಗಳಲ್ಲೂ ಆರ್ಸಿಬಿ ಭರ್ಜರಿ ಜಯ ಸಾಧಿಸಬೇಕು. ಅಲ್ಲದೆ ಉಳಿದ ತಂಡಗಳ ಫಲಿತಾಂಶಗಳ ಆಧಾರದ ಮೇಲೆ ಪ್ಲೇಆಫ್ ಹಂತಕ್ಕೇರಲು ಅವಕಾಶ ಪಡೆಯಬಹುದು. ಅಂದರೆ ಲೀಗ್ ಹಂತದ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆಯುವ ತಂಡ 14 ಅಂಕಗಳನ್ನು ಮಾತ್ರ ಹೊಂದಿದ್ದರೆ, ಆರ್ಸಿಬಿ ಮುಂದಿನ 4 ಮ್ಯಾಚ್ಗಳಲ್ಲಿ ಜಯ ಸಾಧಿಸಿ ನೆಟ್ ರನ್ ರೇಟ್ ನೆರವಿನೊಂದಿಗೆ ಪ್ಲೇಆಫ್ಗೆ ಪ್ರವೇಶಿಸಬಹುದು.