IPL 2024: ಬಲಿಷ್ಠ RCB ಗೆ ಎದುರಾಳಿ ಯಾರು: ಇಲ್ಲಿದೆ ವೇಳಾಪಟ್ಟಿ

Edited By:

Updated on: Mar 12, 2024 | 8:32 AM

IPL 2024 RCB Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ರ ಮೊದಲ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ಪಂದ್ಯಗಳನ್ನಾಡಲಿದೆ. IPL 2024 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ತಂಡವು ಸಿಎಸ್​ಕೆ ತಂಡವನ್ನು ಎದುರಿಸಲಿದೆ. ಇನ್ನು ಐಪಿಎಲ್​ನ 6ನೇ ಪಂದ್ಯದಲ್ಲಿ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಕಣಕ್ಕಿಳಿಯಲಿದೆ.

1 / 8
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಈಗಾಗಲೇ ಬಹುತೇಕ ತಂಡಗಳು ಅಭ್ಯಾಸವನ್ನು ಆರಂಭಿಸಿದೆ. ಇತ್ತ RCB ಕೂಡ ಪ್ರಾಕ್ಟೀಸ್​ ಶುರು ಮಾಡಿಕೊಂಡಿದ್ದು, ಶೀಘ್ರದಲ್ಲೇ ವಿರಾಟ್ ಕೊಹ್ಲಿ (Virat Kohli), ಗ್ಲೆನ್ ಮ್ಯಾಕ್ಸ್​ವೆಲ್, ಫಾಫ್ ಡುಪ್ಲೆಸಿಸ್ ಸೇರಿದಂತೆ ಸ್ಟಾರ್ ಆಟಗಾರರು ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ಇನ್ನುಳಿದಿರುವುದು ಕೇವಲ ದಿನಗಳು ಮಾತ್ರ. ಈಗಾಗಲೇ ಬಹುತೇಕ ತಂಡಗಳು ಅಭ್ಯಾಸವನ್ನು ಆರಂಭಿಸಿದೆ. ಇತ್ತ RCB ಕೂಡ ಪ್ರಾಕ್ಟೀಸ್​ ಶುರು ಮಾಡಿಕೊಂಡಿದ್ದು, ಶೀಘ್ರದಲ್ಲೇ ವಿರಾಟ್ ಕೊಹ್ಲಿ (Virat Kohli), ಗ್ಲೆನ್ ಮ್ಯಾಕ್ಸ್​ವೆಲ್, ಫಾಫ್ ಡುಪ್ಲೆಸಿಸ್ ಸೇರಿದಂತೆ ಸ್ಟಾರ್ ಆಟಗಾರರು ತಂಡವನ್ನು ಕೂಡಿಕೊಳ್ಳಲಿದ್ದಾರೆ.

2 / 8

ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನ ಮೊದಲ ಹಂತದಲ್ಲಿ ಕೇವಲ 21 ಪಂದ್ಯಗಳನ್ನು ಮಾತ್ರ ಆಡಲಾಗುತ್ತದೆ. ಅಂದರೆ ಲೋಕಸಭಾ ಚುನವಾಣಾ ನಿಮಿತ್ತ ಕೇವಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಈ ಇಪ್ಪತ್ತೊಂದು ಪಂದ್ಯಗಳಲ್ಲಿ ಆರ್​ಸಿಬಿ 5 ಪಂದ್ಯಗಳನ್ನಾಡಲಿರುವುದು ವಿಶೇಷ. ಅದರಂತೆ ಆರ್​ಸಿಬಿ ತಂಡದ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ...

3 / 8

CSK vs RCB: ಮಾರ್ಚ್ 22 ರಂದು ನಡೆಯುವ ಐಪಿಎಲ್ ಸೀಸನ್ 17 ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ರಾತ್ರಿ 8 ಗಂಟೆಯಿಂದ ಶುರುವಾಗಲಿದೆ.

4 / 8

RCB vs PBKS: ಮಾರ್ಚ್​ 25 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ರಾತ್ರಿ 7.30 ರಿಂದ ಆರಂಭವಾಗಲಿದೆ.

5 / 8

RCB vs KKR: ಮಾರ್ಚ್ 29 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ರಾತ್ರಿ 7.30 ರಿಂದ ಶುರುವಾಗಲಿದೆ.

6 / 8

RCB vs LSG: ಏಪ್ರಿಲ್ 2 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ರಾತ್ರಿ 7.30 ರಿಂದ ಮ್ಯಾಚ್ ಆರಂಭವಾಗಲಿದೆ.

7 / 8

RR vs RCB: ಏಪ್ರಿಲ್ 6 ರಂದು ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇಂದೋರ್​ನ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಈ ಪಂದ್ಯವು ರಾತ್ರಿ 7.30 ರಿಂದ ಶುರುವಾಗಲಿದೆ.

8 / 8

ಸದ್ಯ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದ್ದು, ಮುಂಬರುವ ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಬಿಸಿಸಿಐ ಘೋಷಿಸಿದೆ. ಅದರಂತೆ ಮೊದಲ ಹಂತದಲ್ಲಿ ಮಾರ್ಚ್ 22 ರಿಂದ ಏಪ್ರಿಲ್ 7 ತನಕ ಒಟ್ಟು 21 ಪಂದ್ಯಗಳು ನಡೆಯಲಿದೆ.

Published On - 8:30 am, Tue, 12 March 24

Loading...
Unable to load recommendations.
Follow Us