AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸೋತರೂ ವಿಶ್ವ ದಾಖಲೆ ಬರೆದ RCB

IPL 2024: ಐಪಿಎಲ್​ 2024ರ 36ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಯಿತು. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಕೆಕೆಆರ್ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 222 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಇದೀಗ ಹೊಸ ವಿಶ್ವ ದಾಖಲೆ ನಿರ್ಮಿಸಿದೆ.

TV9 Web
| Edited By: |

Updated on:Apr 22, 2024 | 2:52 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 36ನೇ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 222 ರನ್​ ಕಲೆಹಾಕಿತು.

1 / 5
ಈ ಕಠಿಣ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು ದಿಟ್ಟ ಹೋರಾಟವನ್ನೇ ಪ್ರದರ್ಶಿಸಿತು. ಅದರಲ್ಲೂ ಕೊನೆಯ ಎಸೆತದಲ್ಲಿ ಆರ್​ಸಿಬಿ ತಂಡಕ್ಕೆ 2 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ 2 ರನ್​ ಓಡುವ ಪ್ರಯತ್ನದಲ್ಲಿ ಲಾಕಿ ಫರ್ಗುಸನ್ ರನೌಟ್ ಆದರು. ಈ ಮೂಲಕ ಆರ್​ಸಿಬಿ 1 ರನ್​ಗಳ ವಿರೋಚಿತ ಸೋಲನುಭವಿಸಿತು.

2 / 5
ಈ ವಿರೋಚಿತ ಸೋಲಿನೊಂದಿಗೆ ಆರ್​ಸಿಬಿ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ. ಅಂದರೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಕೊನೆಯ ಎಸೆತದಲ್ಲಿ ಆಲೌಟ್ ಆಗಿತ್ತು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಆಲೌಟ್ ಆಗಿ ಅತ್ಯಧಿಕ ರನ್ ಪೇರಿಸಿದ ತಂಡ ಎಂಬ ಹೆಗ್ಗಳಿಕೆಗೆ ಆರ್​ಸಿಬಿ ಪಾತ್ರವಾಗಿದೆ.

3 / 5
ಇದಕ್ಕೂ ಮುನ್ನ ಆಲೌಟ್ ಆಗಿ ಅತೀ ಹೆಚ್ಚು ರನ್ ಪೇರಿಸಿದ ವಿಶ್ವ ದಾಖಲೆ ಶ್ರೀಲಂಕಾದ ಎಸ್​ಎಲ್​ ಆರ್ಮಿ ತಂಡದ ಹೆಸರಿನಲ್ಲಿತ್ತು. 2018 ರಲ್ಲಿ ನೆಗಾಂಬೊ ಸಿಸಿ ತಂಡದ ವಿರುದ್ಧ 218 ರನ್​ಗಳಿಸಿ ಆಲೌಟ್ ಆಗುವ ಮೂಲಕ ಎಸ್​ಎಲ್​ ಆರ್ಮಿ ಟಿ20 ಕ್ರಿಕೆಟ್​ನಲ್ಲಿ ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು.

4 / 5
ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 221 ರನ್​ ಬಾರಿಸಿ ಆರ್​ಸಿಬಿ ಆಲೌಟ್ ಆಗಿ ಈ ದಾಖಲೆಯನ್ನು ಮುರಿದಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಆಲೌಟ್ ಆಗುವುದರೊಂದಿಗೆ ಅತ್ಯಧಿಕ ರನ್ ಕಲೆಹಾಕಿದ ತಂಡವೆಂಬ ಕೀರ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾತ್ರವಾಗಿದೆ.

5 / 5

Published On - 7:33 am, Mon, 22 April 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್