IPL 2024: ಶಹಬಾಝ್​ ಅಹ್ಮದ್​ರನ್ನು SRH ತಂಡಕ್ಕೆ ನೀಡಿದ್ದೇ RCB

IPL 2024: ಐಪಿಎಲ್​ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ ಜಯ ಸಾಧಿಸಿದೆ. ಚೆನ್ನೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಹೆಚ್ ತಂಡವು 20 ಓವರ್​ಗಳಲ್ಲಿ 175 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು 7 ವಿಕೆಟ್ ಕಳೆದುಕೊಂಡು 139 ರನ್​ಗಳಿಸಲಷ್ಟೇ ಶಕ್ತರಾದರು. ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಶಹಬಾಝ್ ಅಹ್ಮದ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

|

Updated on:May 25, 2024 | 10:54 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಿ ಸನ್​ರೈಸರ್ಸ್ ಹೈದರಾಬಾದ್ ತಂಡ ಫೈನಲ್​ಗೆ ಪ್ರವೇಶಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡ 36 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಶಹಬಾಝ್ ಅಹ್ಮದ್ ಕೂಡ ಒಬ್ಬರು.

1 / 7
ಏಕೆಂದರೆ ಈ ಪಂದ್ಯದಲ್ಲಿ ಶಹಬಾಝ್ ಅಹ್ಮದ್ 4 ಓವರ್​ಗಳಲ್ಲಿ ನೀಡಿದ್ದು ಕೇವಲ 23 ರನ್​ಗಳು ಮಾತ್ರ. ಅಲ್ಲದೆ ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್ ಹಾಗೂ ರವಿಚಂದ್ರನ್ ಅಶ್ವಿನ್ ಅವರ ವಿಕೆಟ್ ಕಬಳಿಸಿ ಎಸ್​ಆರ್​ಹೆಚ್​ ತಂಡದ ಗೆಲುವಿಗೆ ಪ್ರಮುಖ ಕಾರಣರಾದರು. ಇದಕ್ಕೂ ಮುನ್ನ ಬ್ಯಾಟಿಂಗ್​ನಲ್ಲೂ ಶಹಬಾಝ್ ಅಹ್ಮದ್ 18 ರನ್​ಗಳ ಕೊಡುಗೆ ನೀಡಿದ್ದರು.

2 / 7
ಕುತೂಹಲಕಾರಿ ವಿಷಯ ಎಂದರೆ, ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಶಹಬಾಝ್ ಅಹ್ಮದ್ ಅವರನ್ನು ನೀಡಿದ್ದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಅಂದರೆ ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಆರ್​ಸಿಬಿ ಮತ್ತು ಎಸ್​ಆರ್​ಹೆಚ್ ಆಟಗಾರರನ್ನು ಪರಸ್ಪರ ಟ್ರೇಡ್ ಮಾಡಿಕೊಂಡಿತ್ತು.

3 / 7
ಅದರಂತೆ ಶಹಬಾಝ್ ಅಹ್ಮದ್ ಅವರನ್ನು ಎಸ್​ಆರ್​ಹೆಚ್​ಗೆ ನೀಡಿ ಆರ್​ಸಿಬಿ ಫ್ರಾಂಚೈಸಿ ಎಸ್​ಆರ್​ಹೆಚ್ ತಂಡದಲ್ಲಿದ್ದ ಮಯಾಂಕ್ ಡಾಗರ್ ಅವರನ್ನು ಖರೀದಿಸಿತು. ಈ ಒಂದು ಟ್ರೇಡ್​ ಸನ್​ರೈಸರ್ಸ್ ಹೈದರಾಬಾದ್ ತಂಡದ ಪಾಲಿಗೆ ಪ್ಲಸ್ ಪಾಯಿಂಟ್ ಆಗಿರುವುದು ವಿಶೇಷ.

4 / 7
ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಶಹಬಾಝ್ ಅಹ್ಮದ್ ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಎಸ್​ಆರ್​ಹೆಚ್​ ಪರ ಬಹುತೇಕ ಪಂದ್ಯಗಳಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿರುವ ಶಹಬಾಝ್ ಒಟ್ಟು 207	 ರನ್ ಕಲೆಹಾಕಿದ್ದಾರೆ. ಹಾಗೆಯೇ 6 ವಿಕೆಟ್ ಕಬಳಿಸಿ ತಂಡ ಗೆಲುವಿನಲ್ಲಿ ಕೊಡುಗೆ ನೀಡಿದ್ದಾರೆ.

5 / 7
ಅದೇ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ತಂಡದಿಂದ ಆಯ್ಕೆ ಮಾಡಿದ ಮಯಾಂಕ್ ಡಾಗರ್ ಅವರ ಕೊಡುಗೆ ಕೇವಲ 1 ವಿಕೆಟ್ ಮಾತ್ರ. ಅಂದರೆ 5 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಮಯಾಂಕ್ ಪಡೆದಿದ್ದು ಕೇವಲ ಒಂದು ವಿಕೆಟ್ ಅಷ್ಟೇ.

6 / 7
ಅಂದರೆ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯ ಅತ್ಯುತ್ತಮ ಟ್ರೇಡ್ ಇದೀಗ SRH ತಂಡವನ್ನು ಫೈನಲ್​ಗೆ ಪ್ರವೇಶಿಸುವಂತೆ ಮಾಡಿದೆ. ಅದೇ RCB ಟ್ರೇಡ್ ಮಾಡಿದ ಆಟಗಾರ ಕಳಪೆ ಪ್ರದರ್ಶನದಿಂದಾಗಿ 10 ಪಂದ್ಯಗಳಲ್ಲಿ ಬೆಂಚ್ ಕಾದಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

7 / 7

Published On - 10:52 am, Sat, 25 May 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್

Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?

Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ

Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ

ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ

ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು

‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ

ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್