RCB vs CSK: ಮಳೆ ಬಂದು ಪಂದ್ಯ ರದ್ದಾದರೆ ಯಾವ ತಂಡ ಪ್ಲೇಆಫ್ಗೆ?
IPL 2024 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) RCB ಮತ್ತು CSK ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್ಸಿಬಿ ತಂಡ 10 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಸಿಎಸ್ಕೆ 21 ಮ್ಯಾಚ್ಗಳನ್ನು ಗೆದ್ದುಕೊಂಡಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.
1 / 6
ಐಪಿಎಲ್ನ (IPL 2024) 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಮೇ 18 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೇ 18 ರಂದು ಬೆಂಗಳೂರಿನಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
2 / 6
AccuWeather.com ಪ್ರಕಾರ, ಮೇ 18 ರಂದು ಬೆಂಗಳೂರಿನಲ್ಲಿ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸಂಜೆ, ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಶೇ.100 ರಷ್ಟು ಮೋಡ ಆವರಿಸಲಿದೆ.
3 / 6
ಅಲ್ಲದೆ ಈ ವೇಳೆ ಮಳೆಯ ಸಂಭವನೀಯತೆಯು ಶೇಕಡಾ 47 ರಷ್ಟಿರಲಿದೆ ಎಂದು ತಿಳಿಸಿದೆ. ಅಲ್ಲದೆ ರಾತ್ರಿ ವೇಳೆಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳು ಶೇಕಡಾ 60 ಕ್ಕಿಂತ ಹೆಚ್ಚಿದೆ. ಅಂದರೆ ಆರ್ಸಿಬಿ-ಸಿಎಸ್ಕೆ ನಡುವಣ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡುವುದು ಬಹುತೇಕ ಖಚಿತ ಎನ್ನಬಹುದು.
4 / 6
ಇದರ ಬೆನ್ನಲ್ಲೇ, ಭಾರೀ ಮಳೆಯಿಂದಾಗಿ ಪಂದ್ಯ ರದ್ದಾದರೆ ಯಾವ ತಂಡ ಪ್ಲೇಆಫ್ ಪ್ರವೇಶಿಸಲಿದೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಚೆನ್ನೈ ಸೂಪರ್ ಕಿಂಗ್ಸ್. ಏಕೆಂದರೆ ಸಿಎಸ್ಕೆ ತಂಡವು ಒಟ್ಟು 14 ಅಂಕಗಳೊಂದಿಗೆ ಪ್ರಸ್ತುತ ಅಂಕ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.
5 / 6
ಶನಿವಾರ ಮಳೆಯಿಂದಾಗಿ ಪಂದ್ಯ ರದ್ದಾದರೆ ಆರ್ಸಿಬಿ ಮತ್ತು ಸಿಎಸ್ಕೆ ತಲಾ ಒಂದೊಂದು ಪಾಯಿಂಟ್ ಹಂಚಿಕೊಳ್ಳಲಿದೆ. ಇದರಿಂದ ಸಿಎಸ್ಕೆ ತಂಡದ ಒಟ್ಟು ಪಾಯಿಂಟ್ಸ್ 15 ಆಗಲಿದ್ದು, ಇದೇ ವೇಳೆ ಆರ್ಸಿಬಿ ತಂಡದ ಅಂಕ 13 ರಲ್ಲೇ ಉಳಿಯಲಿದೆ. ಅತ್ತ 15 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ 3ನೇ ಅಥವಾ 4ನೇ ಸ್ಥಾನದೊಂದಿಗೆ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.
6 / 6
ಅಂದರೆ ಮೇ 18 ರಂದು ಮಳೆ ಬಂದು ಪಂದ್ಯ ರದ್ದಾದರೆ ಆರ್ಸಿಬಿ ತಂಡದ ಐಪಿಎಲ್ನಿಂದ ಹೊರಬೀಳಲಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು 15 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ. ಹೀಗಾಗಿ ಬೆಂಗಳೂರಿನಲ್ಲಿ ಶನಿವಾರ ನಡೆಯಲಿರುವ ಪಂದ್ಯವು ಮಳೆಗೆ ಅಹುತಿಯಾಗದಿರಲಿ ಎಂಬುದೇ ಆರ್ಸಿಬಿ ಅಭಿಮಾನಿಗಳ ಅಂಬೋಣ.